ಸುಳ್ಯ: ಪರೀಕ್ಷೆ ಮುಗಿಸಿ ಮನೆಗೆ ಮರಳುತ್ತಿದ್ದ ಬಾಲಕ ಮನೆ ಸೇರಲೇ ಇಲ್ಲ!! ಭೀಕರ ರಸ್ತೆ ಅಪಘಾತದಲ್ಲಿ ಓರ್ವ ವಿದ್ಯಾರ್ಥಿ ಮೃತ್ಯು-ಇನ್ನೋರ್ವ ಗಂಭೀರ

Share the Article

ಸುಳ್ಯ : ಸವಾರನೋರ್ವನ ನಿಯಂತ್ರಣ ತಪ್ಪಿ ಬೈಕ್ ಪಲ್ಟಿಯಾದ ಪರಿಣಾಮ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆಯೊಂದು ಸುಳ್ಯ ತಾಲೂಕಿನ ಪೆರಾಜೆಯ ಕುಂಬಳಚೇರಿ ಎಂಬಲ್ಲಿ ನಡೆದಿದೆ.

ಪೆರಾಜೆಯ ಲೋಕನಾಥ ಕುಂದಲ್ಪಾಡಿ ಅವರ ಪುತ್ರ ವಿಶ್ವದೀಪ್ ಮೃತಪಟ್ಟ ಬಾಲಕ. ಗಾಯಗೊಂಡ ಈತನ ಸಹಪಾಠಿ ಪೆರಾಜೆಯ ಆರ್ ಡಿ ವೆಂಕಪ್ಪ ಎಂಬುವವರ ಪುತ್ರ ದರ್ಶನ್. ಇಬ್ಬರೂ ಸುಳ್ಯ ಸೈಂಟ್ ಜೋಸೆಫ್ ಶಾಲೆಯ 9 ನೇ ತರಗತಿಯ ವಿದ್ಯಾರ್ಥಿಗಳು.

ಇಬ್ಬರೂ ಪರೀಕ್ಷೆ ಮುಗಿಸಿ ಬೈಕ್ ನಲ್ಲಿ ಮನೆಗೆ ವಾಪಾಸ್ಸು ಬರುತ್ತಿದ್ದ ವೇಳೆ ಕುಂಬಳಚೇರಿ ಗಡಿಗುಡ್ಡೆ ಎಂಬಲ್ಲಿ ಈ ದುರ್ಘಟನೆ ನಡೆದಿದೆ.

ಇನ್ನೊಂದು ಮೂಲಗಳ ಪ್ರಕಾರ, ಎದುರಿನಿಂದ ಬರುತ್ತಿದ್ದ ಜೀಪಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೈಕ್ ಸವಾರ ನಿಯಂತ್ರಣ ತಪ್ಪಿದ್ದು ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.

ದರ್ಶನ್ ಬೈಕ್ ಚಲಾಯಿಸುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.

ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply