ಬೆಳ್ತಂಗಡಿ : ಪುಂಜಾಲಕಟ್ಟೆ-ಚಾರ್ಮಾಡಿ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ 718 ಕೋಟಿ ಮಂಜೂರು

0 10

ಪುಂಜಾಲಕಟ್ಟೆಯಿಂದ ಚಾರ್ಮಾಡಿವರೆಗಿನ 35 ಕಿ.ಮೀ ಚತುಷ್ಪಥ ರಸ್ತೆ ಅಭಿವೃದ್ಧಿ ಕಾಮಗಾರಿಗೆ 718 ಕೋಟಿ ಅನುದಾನವನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮಂಜೂರು ಮಾಡಿದ್ದಾರೆ.

ಈ ರಸ್ತೆಯ ಟೆಂಡರ್ ಪ್ರಕ್ರಿಯೆ ಇನ್ನು ಒಂದು ತಿಂಗಳ ಒಳಗೆ ನಡೆಯಲ್ಲಿದ್ದು, ನಂತರ ರಸ್ತೆ ಅಭಿವೃದ್ಧಿ ಕಾರ್ಯ ಶುರುವಾಗಲಿದೆ.

ಈ ಕಾರ್ಯಕ್ಕೆ ಪ್ರಧಾನಿಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರಾದ ಶ್ರೀ ನಿತಿನ್ ಗಡ್ಕರಿ, ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಶ್ರೀ ಬಸವರಾಜ್ ಬೊಮ್ಮಯಿ ,ಜಿಲ್ಲೆಯ ಸಂಸದರಾದ ಶ್ರೀ ನಳಿನ್ ಕುಮಾರ್ ಕಟೀಲ್ ಅವರಿಗೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಧನ್ಯವಾದವನ್ನು ತಿಳಿಸಿದ್ದಾರೆ.

Leave A Reply