ಹೈನುಗಾರರಿಗೆ ಸಾಲ ಸೌಲಭ್ಯಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆಗೆ ಹಸಿರು ನಿಶಾನೆ
| ಬೊಮ್ಮಾಯಿ ಬಜೆಟ್‌ನಲ್ಲಿ ನೀಡಿದ ಭರವಸೆ ಈಡೇರಿಕೆ

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರಚನೆ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್‌ನಲ್ಲಿ ನೀಡಿದ್ದ ಭರವಸೆಯನ್ನು ಈಡೇರಿಸಿದ್ದಾರೆ.

ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಮೂಲಕ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಒದಗಿಸಲಾಗುತ್ತದೆ. 1000 ರೂಪಾಯಿ ನೀಡಿ ಹೈನುಗಾರರು ಷೇರು ಪಡೆಯಬಹುದು. ಸರ್ಕಾರದಿಂದ ಬ್ಯಾಂಕಿಗೆ 100 ಕೋಟಿ ರೂಪಾಯಿ ಬಂಡವಾಳ ನೀಡಲಾಗುತ್ತದೆ. ಹಾಲು ಒಕ್ಕೂಟಗಳಿಂದ 260 ಕೋಟಿ ರೂಪಾಯಿ ಬಂಡವಾಳ ತೊಡಗಿಸಲಾಗುತ್ತದೆ. ಇದರಿಂದ ರಾಜ್ಯದ 24.67 ಲಕ್ಷ ಹಾಲು ಉತ್ಪಾದಕರಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.

Leave A Reply

Your email address will not be published.