ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ; ಮುಂದಿನ ನಾಯಕ ಯಾರು ?

ಇನ್ನೇರಡು ದಿನಗಳಲ್ಲಿ ಐಪಿಎಲ್ (IPL 2022) 15ನೇ ಆವೃತ್ತಿ ಆರಂಭವಾಗಲಿದೆ. ಮೊದಲ ಪಂದ್ಯದಲ್ಲಿ ಚೆನ್ನೈ ಹಾಗೂ ಕೋಲ್ಕತ್ತಾ ಸೆಣೆಸಲಿವೆ. ಆದರೆ ಆರಂಭಕ್ಕೂ ಮುನ್ನ ಸಿಎಸ್​ಕೆ ತಂಡದಿಂದ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದೆ. ಚೆನ್ನೈ ಸೂಪರ್ ಕಿಂಗ್ಸ್ ನಾಯಕತ್ವಕ್ಕೆ ಮಹೇಂದ್ರ ಸಿಂಗ್ ಧೋನಿ ರಾಜೀನಾಮೆ ನೀಡಿದ್ದಾರೆ!

ಹಲವು ಬಾರಿ ಎಂಎಸ್ ಧೋನಿ ಈ ಸೀಸನ್​ನಲ್ಲಿ ಆಡಿದ ನಂತರ ಮುಂದಿನ ಸೀಸನ್​ನಲ್ಲಿ ನಾಯಕತ್ವ ತೊರೆಯುತ್ತಾರೆ ಎಂಬ ಮಾತು ಕೇಳಿಬಂದಿತ್ತು. ಆದರೆ ಧೋನಿ ಸಿಎಸ್‌ಕೆ ನಾಯಕತ್ವಕ್ಕೆ ಇದ್ದಕ್ಕಿದ್ದಂತೆ ರಾಜೀನಾಮೆ ನೀಡಿದ್ದಾರೆ
ಈ ವಿಚಾರವನ್ನು ಸ್ವತಃ ಸಿಎಸ್​ಕೆ ಆಡಳಿತ ಮಂಡಳಿ ತನ್ನ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಹೇಳಿಕೊಂಡಿದೆ. 

ಮಹೇಂದ್ರ ಸಿಂಗ್ ಧೋನಿ ಕಳೆದ 12 ಸೀಸನ್‌ಗಳಲ್ಲಿ ಚೆನ್ನೈ ತಂಡದ ನಾಯಕರಾಗಿದ್ದರು. 2008 ರಲ್ಲಿ ಲೀಗ್ ಪ್ರಾರಂಭವಾದಾಗಿನಿಂದ ಅವರು ಚೆನ್ನೈ ಸೂಪರ್ ಕಿಂಗ್ಸ್‌ ನಾಯಕತ್ವದ ಜವಬ್ದಾರಿ ಹೊತ್ತಿದ್ದರು. ಧೋನಿ ಐಪಿಎಲ್‌ನಲ್ಲಿ ಯಶಸ್ವಿ ನಾಯಕರಾಗಿದ್ದು, ಅವರ ನಾಯಕತ್ವದಲ್ಲಿ ಸಿಎಸ್​ಕೆ ತಂಡ ಇದುವರೆಗೆ ನಾಲ್ಕು ಬಾರಿ ಪ್ರಶಸ್ತಿ ಗೆದ್ದಿದೆ.

ಧೋನಿ ಸಿಎಸ್‌ಕೆ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದು, ಅಭಿಮಾನಿಗಳಲ್ಲಿ ಬೇಸರ ಮೂಡಿಸಿದೆ. ಆದರೆ ಧೋನಿ ಈ ಆವೃತ್ತಿಯಲ್ಲಿ ಮತ್ತು ನಂತರ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತಾರೆ ಎಂದು ಸಿಎಸ್‌ಕೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಈ ತಂಡದ ಮುಂದಿನ ನಾಯಕ ಯಾರು ಎಂದರೆ , ರವೀಂದ್ರ ಜಡೇಜಾ ಸಿಎಸ್​ಕೆ ತಂಡದ ನಾಯಕತ್ವವಹಿಸಿಕೊಂಡಿದ್ದಾರೆ.  2012 ರಿಂದ ಚೆನ್ನೈ ಸೂಪರ್ ಕಿಂಗ್ಸ್‌ನ ಅವಿಭಾಜ್ಯ ಅಂಗವಾಗಿರುವ ಜಡೇಜಾ, ಸಿಎಸ್ ಕೆ ತಂಡದ ನಾಯಕರಾಗಿದ್ದಾರೆ. ಧೋನಿ ಚೆನ್ನೈ ತಂಡದ ನಾಯಕತ್ವವನ್ನು ರವೀಂದ್ರ ಜಡೇಜಾಗೆ ಹಸ್ತಾಂತರಿಸಿದ್ದಾರೆ.

Leave A Reply

Your email address will not be published.