SSC ಯಿಂದ 4000 ಕ್ಕೂ ಅಧಿಕ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ| ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ

ಸಿಬ್ಬಂದಿ ನೇಮಕಾತಿ ಆಯೋಗವು ( ಎಸ್ ಎಸ್ ಸಿ) 4000ಕ್ಕೂ ಅಧಿಕ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ನಾನ್ ಟೆಕ್ನಿಕಲ್) ಗ್ರೂಪ್ ಸಿ ಹುದ್ದೆಗಳ ನೇಮಕಾತಿ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಆಸಕ್ತರು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಹುದ್ದೆಗಳ ಬಗೆಗಿನ ಅಧಿಸೂಚನೆಯನ್ನು ಓದಬಹುದು.

ಭಾರತದೆಲ್ಲೆಡೆ ಪೂರ್ಣ
ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾರ್ಚ್ 22, 2022 ರಿಂದ ಏಪ್ರಿಲ್ 30, 2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಆನ್‌ಲೈನ್ ಅರ್ಜಿ ಸಲ್ಲಿಕೆ ಆರಂಭಿಕ ದಿನಾಂಕ : 22-03-2022

ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 30-04-2022

ಆನ್‌ಲೈನ್ ಮೂಲಕ ಅರ್ಜಿ ಶುಲ್ಕ ಪಾವತಿಗೆ ಕೊನೆ ದಿನಾಂಕ: 02-05-2022

ಆಫ್‌ಲೈನ್ ಚಲನ್ ಜೆನೆರೇಟ್ ಮಾಡಲು ಕೊನೆ ದಿನಾಂಕ: 03-05-2022

ಆಫ್‌ಲೈನ್ ಮೂಲಕ ಶುಲ್ಕ ಪಾವತಿಗೆ ಕೊನೆ ದಿನಾಂಕ: 04-05-2022

ಅಪ್ಲಿಕೇಶನ್ ತಿದ್ದುಪಡಿಗೆ ಅವಕಾಶ ನೀಡುವ ದಿನಾಂಕ : ಮೇ 05 ರಿಂದ 09, 2022

ಪೇಪರ್-1 ಕಂಪ್ಯೂಟರ್ ಆಧಾರಿತ ಪರೀಕ್ಷೆ ದಿನಾಂಕ: ಜುಲೈ 2022
ಪೇಪರ್-2 ವಿವರಣಾತ್ಮಕ ಪರೀಕ್ಷೆ ದಿನಾಂಕ: ಶೀಘ್ರದಲ್ಲಿ ತಿಳಿಸಲಾಗುವುದು

ವಿದ್ಯಾರ್ಹತೆ : ಸಿಬ್ಬಂದಿ ನೇಮಕಾತಿ ಆಯೋಗ ನೇಮಕಾತಿಯ ಮಲ್ಟಿ ಟಾಸ್ಕಿಂಗ್ ಸ್ಟಾಫ್ (ನಾನ್ ಟೆಕ್ನಿಕಲ್) ಗ್ರೂಪ್ ಸಿ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು.

ವಯೋಮಿತಿ : ಈ ಹುದ್ದೆಗಳಿಗೆ ಜನವರಿ 1,2022ರ ಅನ್ವಯವಾಗುವಂತೆ ಕನಿಷ್ಟ 18 ರಿಂದ ಗರಿಷ್ಟ 25 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ (ಪೇಪರ್-1), ಸಹಿಷ್ಣುತಾ ಪರೀಕ್ಷೆ (PET), ದೈಹಿಕ ಸಾಮರ್ಥ್ಯ ಪರೀಕ್ಷೆ (PST) (ಹವಾಲ್ದಾರ್ ಹುದ್ದೆಗಳಿಗೆ ಮಾತ್ರ), ವಿವರಣಾತ್ಮಕ ಪರೀಕ್ಷೆ (ಪೇಪರ್-2) ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮೇ 2, 2022ರೊಳಗೆ ಪಾವತಿಸಬೇಕು. ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ, ಮಹಿಳಾ, ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave A Reply

Your email address will not be published.