ST ಮೀಸಲಾತಿ ಬಗ್ಗೆ ಸಿ.ಎಂ ಮಹತ್ವದ ಹೇಳಿಕೆ

ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಆಲೋಚಿಸಿದ್ದಾರೆ. ಮಹತ್ವದ ಹೇಳಿಕೆ ನೀಡಿದ್ದಾರೆ.

ಬುಧವಾರ ವಿಧಾನಸೌಧದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸಚಿವರು, ಕಾನೂನು ತಜ್ಞರುಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆಯೂ ಚರ್ಚೆಯಾಗಿದೆ. ಯಡಿಯೂರಪ್ಪ ಅವರ ಸರ್ಕಾರದಲ್ಲಿ ಸಮಿತಿ ವರದಿ ಸಲ್ಲಿಸಿದೆ. ವರದಿಯಲ್ಲಿ ಎಸ್.ಸಿ ಮತ್ತು ಎಸ್. ಟಿ ಗೆ ಮೀಸಲಾತಿ ಹೆಚ್ಚಿಸಬೇಕೆಂದು ಶಿಫಾರಸ್ಸು ಮಾಡಲಾಗಿದೆ. ಅದರಂತೆ ನಿರ್ಣಯ ತೆಗೆದುಕೊಳ್ಳಬೇಕು ಎಂದು ಸಿಎಂ ಹೇಳಿದ್ದಾರೆ.

ಹಿಂದಿನ ಸರ್ಕಾರ ಈ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿ ರಚಿಸಿತ್ತು ಮೀಸಲಾತಿ ಕೊಡುವುದಾದರೆ ಸಂವಿಧಾನಾತ್ಮಕವಾಗಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ನೀಡಬೇಕು. ಆ ನಿಟ್ಟಿನಲ್ಲಿ ಕೂಡಲೇ ಅಡ್ವೊಕೇಟ್ ಜನರಲ್ ಅವರಿಗೆ ಮೂರೂ ವರದಿಗಳ ಬಗ್ಗೆ ವರದಿ ನೀಡಲು ತಿಳಿಸಲಾಗಿದೆ. 2 ಎ ವರ್ಗಕ್ಕೆ ಸೇರಿರುವ ಕುರುಬ ಸಮಾಜದವರು ಪರಿಶಿಷ್ಟ ಪಂಗಡಕ್ಕೆ ಸೇರಬೇಕೆಂಬ ಬೇಡಿಕೆ ಇದೆ. ಅದನ್ನು ಸರ್ವ ಪಕ್ಷಗಳ ಸಭೆಯಲ್ಲಿಟ್ಟು, ಒಪ್ಪಿಗೆ ಪಡೆಯಲಾಗುವುದು ಎಂದು ಶ್ರೀಯುತ ಬೊಮ್ಮಾಯಿ ಅವರು ಹೇಳಿದ್ದಾರೆ.

Leave A Reply

Your email address will not be published.