ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಎಸ್ ಎಸ್.ಎಲ್.ಸಿ ವಿದ್ಯಾರ್ಥಿನಿ!! ಆಕೆಯ ಡೆತ್ ನೋಟ್ ನಲ್ಲಿತ್ತು ಸಾವಿಗೆ ಕಾರಣ

0 4

ಚಾಮರಾಜನಗರ: ಎಸ್ ಎಸ್ ಎಲ್ ಸಿ ವಿದ್ಯಾರ್ಥಿಯೊಬ್ಬಳು ಸೀರೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಾಮರಾಜನಗರ, ಕೊಳ್ಳೆಗಾಲ ತಾಲೂಕಿನ ಮುಳ್ಳೂರು ಎಂಬ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ಮಮತಾ(16) ಎಂದು ಗುರುತಿಸಲಾಗಿದ್ದು, ಈಕೆ ಕಳೆದ ಮೂರು ದಿನಗಳಿಂದ ಮನಸ್ಸಿಗೆ ನೆಮ್ಮದಿ ಇಲ್ಲ, ಹಾಗಾಗಿ ಈ ನಿರ್ಧಾರ ಕೈಗೊಂಡಿದ್ದೇನೆ, ನನ್ನ ಸಾವಿಗೆ ನಾನೇ ಕಾರಣ ಮಿಸ್ ಯು ಆಲ್ ಎಂದು ಡೆತ್ ನೋಟ್ ಬರೆದಿಟ್ಟು ನೇಣುಬಿಗಿದುಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಕೊಳ್ಳೇಗಾಲ ಪೊಲೀಸ್ ಠಾಣೆಯಲ್ಲಿ ದೂರು ಆತ್ಮಹತ್ಯೆ ದಾಖಲಾಗಿದ್ದು,ಪೊಲೀಸರು ಸ್ಥಳಕ್ಕೆ ತೆರಳಿ ಪ್ರಾಥಮಿಕ ತನಿಖೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

Leave A Reply