ರಾಷ್ಟ್ರೀಯ ಹೆದ್ದಾರಿ 73 ರ ಮುಂಡಾಜೆಯ ಸೀಟು ಬಸ್ ನಿಲ್ದಾಣದ ಮುಂಭಾಗದಲ್ಲಿ ಸ್ವಿಫ್ಟ್ ಕಾರೊಂದು ಆಟೋ ರಿಕ್ಷಾಗೆ ಡಿಕ್ಕಿ ಹೊಡೆದು ನಂತರ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಘಟನೆಯಲ್ಲಿ ವಾಹನ ಸವಾರರು ಸಣ್ಣಪುಟ್ಟ ಗಾಯಗಳಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಅಪಘಾತದ ರಭಸಕ್ಕೆ ಎರಡೂ ಗಾಡಿಗಳು ಜಖಂಗೊಂಡಿವೆ.