ಮಂಗಳೂರು: ಹಿಜಾಬ್ ತೀರ್ಪು ವಿರೋಧಿಸಿ ರಸ್ತೆಗಿಳಿದ ವಿದ್ಯಾರ್ಥಿ ಗಳ ತಂಡ!! ಅಲ್ಲಾಹೋ ಅಕ್ಬರ್ ಘೋಷಣೆ-ರಸ್ತೆ ತಡೆಯಲು ಪ್ರಯತ್ನ

0 5

ಹಿಜಾಬ್ ಕುರಿತು ರಾಜ್ಯ ಹೈಕೋರ್ಟ್ ನೀಡಿದ ತೀರ್ಪುನ್ನು ವಿರೋಧಿಸಿ ಪ್ರತಿಭಟನೆಗಳು ನಡೆಯುತ್ತಿರುವ ಬೆನ್ನಲ್ಲೇ ಮಂಗಳೂರಿನ ಕಾಲೇಜು ವಿದ್ಯಾರ್ಥಿಗಳ ತಂಡವೊಂದು ಪ್ರತಿಭಟನೆ ನಡೆಸಿ, ಅಲ್ಲಹೋ ಅಕ್ಬರ್ ಘೋಷಣೆ ಕೂಗುತ್ತಾ ರಸ್ತೆ ತಡೆಯಲು ಮುಂದಾಗಿದ್ದು, ಪೊಲೀಸರ ಮಧ್ಯಪ್ರವೇಶದಿಂದ ಪ್ರತಿಭಟನೆ ಹಿಂಪಡೆದ ಘಟನೆ ಮಾರ್ಚ್ 25 ರ ಶುಕ್ರವಾರ ಸಂಜೆ ಮಂಗಳೂರಿನ ಕ್ಲಾಕ್ ಟವರ್ ಬಳಿ ನಡೆದಿದೆ.

ಮಂಗಳೂರು ವಿಶ್ವ ವಿದ್ಯಾನಿಲಯದ ವಿದ್ಯಾರ್ಥಿ ಸಮನ್ವಯ ಸಮಿತಿ ಎಂಬ ಹೆಸರಿನ ತಂಡವೊಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದು, ಸುಮಾರು 100 ಕ್ಕೂ ಮಿಕ್ಕಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ನ್ಯಾಯಕ್ಕಾಗಿ ಆಗ್ರಹಿಸಿ ಅಲ್ಲಾಹೋ ಅಕ್ಬರ್ ಘೋಷಣೆ ಕೂಗುತ್ತಾ ಫ್ಲೆಕ್ಸ್ ಗಳನ್ನು ಹಿಡಿದು ಪ್ರತಿಭಟಿಸಿದರು.

ಪೊಲೀಸರಿಂದ ಶಾಂತಿಯುತ ಪ್ರತಿಭಟನೆಗೆ ಅವಕಾಶ ಪಡೆದಿದ್ದ ವಿದ್ಯಾರ್ಥಿ ಸಂಘಟನೆಯು, ಪ್ರತಿಭಟನಾ ಸ್ಥಳದಲ್ಲಿ ಉದ್ರಿಕ್ತಗೊಂಡು ರಸ್ತೆ ತಡೆಯಲು ಮುಂದಾಗಿದ್ದು ಪೊಲೀಸರು ಮಧ್ಯಪ್ರವೇಶಿಸಿ ರಸ್ತೆ ತಡೆಯದಂತೆ ಮನವಿ ಮಾಡಿದರು. ಆದರೆ ಇದಕ್ಕೆ ಜಗ್ಗದ ವಿದ್ಯಾರ್ಥಿಗಳು ರಸ್ತೆಯಲ್ಲೇ ಕುಳಿತು ಆಕ್ರೋಶ ವ್ಯಕ್ತಪಡಿಸಿದ್ದು, ಪೊಲೀಸ್ ಇಲಾಖೆಯ ಮೇಲೂ ಧಿಕ್ಕಾರ ಕೂಗಿದ್ದರು.

ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದ್ದು,ಬಳಿಕ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕಾಗಮಿಸಿ ವಿದ್ಯಾರ್ಥಿಗಳನ್ನು ಮನವೊಲಿಸುವಲ್ಲಿ ಸಫಲರಾಗಿದ್ದು, ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.

Leave A Reply