ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದ ಖಾಸಗಿ ಬಸ್ಸು !! | 7 ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದು 7 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಅತ್ತಿಗುಂಡಿ ಸಮೀಪ ನಡೆದಿದೆ.

ದತ್ತಪೀಠದಿಂದ ಮರಳುತ್ತಿದ್ದ ಖಾಸಗಿ ಬಸ್ ಅತ್ತಿಗುಂಡಿ ಬಳಿ ಬರುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಈ ಸಂಬಂಧ ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.