ಮಂಗಳೂರು: ಯೂ ಟರ್ನ್ ತೆಗೆದುಕೊಳ್ಳುವ ಭರದಲ್ಲಿ ಅಂಗಡಿಗೆ ಗುದ್ದಿದ ಕಾರು !! | ಕೂದಲೆಳೆ ಅಂತರದಲ್ಲಿ ಮಹಿಳೆ ಹಾಗೂ ವ್ಯಕ್ತಿ ಪಾರು

ಯೂ ಟರ್ನ್ ತೆಗೆದುಕೊಳ್ಳುವ ಭರದಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಂದಕ್ಕೆ ಡಿಕ್ಕಿ ಹೊಡೆದಿದ್ದು, ಪಕ್ಕದಲ್ಲೇ ನಿಂತಿದ್ದ ಮಹಿಳೆ ಹಾಗೂ ವ್ಯಕ್ತಿಯೊಬ್ಬರು ಕೂದಲೆಳೆ ಅಂತರದಲ್ಲಿ ಪಾರಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.

 

ಮಂಗಳೂರಿನ ಕೊಡಿಯಾಲಬೈಲ್ ನಲ್ಲಿ ಬುಧವಾರ ನಡೆದ ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಥಬೀದಿ ಕಡೆಯಿಂದ ಕೊಡಿಯಾಲಬೈಲ್ ಕರ್ನಾಟಕ ಬ್ಯಾಂಕ್ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ಗುದ್ದಿದೆ. ಪಕ್ಕದಲ್ಲಿ ನಿಂತಿದ್ದ ವ್ಯಕ್ತಿ ಹಾಗೂ ಮಹಿಳೆ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ವೈರಲ್ ಆಗಿದೆ.

Leave A Reply

Your email address will not be published.