ಮಂಗಳೂರು: ಹಿಟ್ ಅಂಡ್ ರನ್ ಪ್ರಕರಣದಲ್ಲಿ ಸ್ಕೂಟರ್ ಸಹಸವಾರ ಮಹಿಳೆ ದಾರುಣ ಸಾವು

ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮಹಿಳೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಕಾಪಿಕಾಡು ಎಂಬಲ್ಲಿ ನಡೆದಿದೆ.


Ad Widget

Ad Widget

ಮೃತ ಮಹಿಳೆಯನ್ನು ಎಮಿಲ್ಡಾ ಡಿಸೋಜ (59) ಎಂದು ಗುರುತಿಸಲಾಗಿದೆ. ಇವರು ತೊಕ್ಕೊಟ್ಟು ಸಮೀಪದ ಕಾಪಿಕಾಡು ಉಮಾಮಹೇಶ್ವರಿ ದೇವಸ್ಥಾನದ ಬಳಿಯ ಪ್ರತಿಷ್ಠಿತ ಜಾನ್ ಬೇಕರಿ ಕುಟುಂಬದ ಸದಸ್ಯೆ ಎಂದು ತಿಳಿದುಬಂದಿದೆ.


Ad Widget

ಇಂದು ಮೊಮ್ಮಗಳ ಹುಟ್ಟುಹಬ್ಬವಿದ್ದ ಕಾರಣ ಅದೇ ಖುಷಿಯಲ್ಲಿ ಬೆಳ್ಳಂಬೆಳಗ್ಗೆ ತೊಕ್ಕೊಟ್ಟು ಚರ್ಚ್ ಗೆ ತೆರಳಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡು ಹಿಂತಿರುಗಿದ್ದರು. ಅರ್ಧ ದಾರಿಯವರೆಗೂ ಸಂಬಂಧಿಕರ ಜೊತೆಗೆ ನಡೆದುಕೊಂಡೇ ಬರುತ್ತಿದ್ದ ಅವರನ್ನು ಪ್ಲೇವಿ ಡಿಸೋಜ ಎಂಬ ಪರಿಚಯಸ್ಥ ಮಹಿಳೆ ತನ್ನ ಆಕ್ಟಿವಾ ಸ್ಕೂಟರಿಗೆ ಹತ್ತಿಸಿದ್ದಾರೆ.

ಸ್ಕೂಟರ್ ಕಾಪಿಕಾಡು ರಾಜ್ ಕೇಟರರ್ಸ್ ಬಳಿ ತಲುಪುತ್ತಿದ್ದಂತೆಯೇ ಹಿಂದಿನಿಂದ ಬಂದ ಕಾರೊಂದು ಡಿಕ್ಕಿ ಹೊಡೆದಿದ್ದು ಹಿಂಬದಿ ಸವಾರೆ ಎಮಿಲ್ಡ ಅವರು ರಸ್ತೆಗೆಸೆಯಲ್ಪಟ್ಟಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ದಾರುಣ ಸಾವನ್ನಪ್ಪಿದ್ದಾರೆ. ಸ್ಕೂಟರ್ ಸವಾರೆ ಪ್ಲೇವಿ ಡಿ ಸೋ ಅವರು ಕೂಡ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

Ad Widget

Ad Widget

Ad Widget

ಸ್ಕೂಟರ್ ಗೆ ಡಿಕ್ಕಿ ಹೊಡೆದ ಕಾರು ಚಾಲಕ ಕಾರು ಸಮೇತ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಹಿಟ್ ಆಂಡ್ ರನ್ ನಡೆಸಿದ ಕಾರಿನ ಬಗ್ಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

error: Content is protected !!
Scroll to Top
%d bloggers like this: