ಪುತ್ತೂರು: ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಕೂಲಿ ಕಾರ್ಮಿಕ ಆತ್ಮಹತ್ಯೆಗೆ ಶರಣು

ಮಾನಸಿಕ ಒತ್ತಡದಿಂದ ಬಳಲುತ್ತಿದ್ದ ಕೂಲಿ ಕಾರ್ಮಿಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯ ಪದವಿನ ಶಬರಿ ನಗರದಲ್ಲಿ ಇಂದು ಬೆಳಗ್ಗೆ ನಡೆದಿದೆ.

 

ಪಡುವನ್ನೂರು ಗ್ರಾಮದ ಸುಳ್ಯಪದವು ಸಮೀಪದ ಶಬರಿ ನಗರದ ನಿವಾಸಿ ಅಶೋಕ ಮೂಲ್ಯ (43) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.

ಮನೆಯ ಸಮೀಪದ ಕೊಟ್ಟಿಗೆಯಲ್ಲಿ ಅವರು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಮಾನಸಿಕ ಒತ್ತಡವೇ ಆತ್ಮಹತ್ಯೆಗೆ ಕಾರಣ ಎಂದು ಶಂಕಿಸಲಾಗಿದೆ. ಕಳೆದ ಕೆಲವು ತಿಂಗಳುಗಳಿಂದ ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಅವರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆಯ ಬಳಿಕವೂ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು. ಇದೀಗ ಆತ್ಮಹತ್ಯೆಗೆ ಇದೇ ಕಾರಣವಾಗಿರಬಹುದು ಎಂಬುದಾಗಿ ಶಂಕೆ ವ್ಯಕ್ತವಾಗಿದೆ.

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.