ಖಾಸಗಿ ಶಾಲಾ ಬಸ್ ಪಲ್ಟಿ : ವಿದ್ಯಾರ್ಥಿಗಳಿಗೆ ಗಾಯ

ಹಾಸನ: ಖಾಸಗಿ ಶಾಲಾ ಬಸ್ ಪಲ್ಟಿಯಾಗಿ, ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದಲ್ಲಿ ನಡೆದಿದೆ.

 

ಶ್ರವಣಬೆಳಗೊಳದಲ್ಲಿರುವ ಬಿಎಂಎಚ್ ಶಾಲೆಯ ಬಸ್ ಪರಮ ಗ್ರಾಮದ ಅಪಘಾತಕ್ಕೀಡಾಗಿ ಪಲ್ಟಿಯಾಗಿದೆ. ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ಬಸ್ ಹಳ್ಳಕ್ಕೆ ಉರುಳಿದೆ.

ತಕ್ಷಣ ಸ್ಥಳೀಯರು ನೆರವಿಗೆ ಧಾವಿಸಿದ್ದು, ಅವರ ಸಮಯಪ್ರಜ್ಞೆಯಿಂದ ವಿದ್ಯಾರ್ಥಿಗಳನ್ನು ರಕ್ಷಣೆ ಮಾಡಲಾಗಿದೆ. ಅದಾಗ್ಯೂ ಐದಕ್ಕೂ ಅಧಿಕ ವಿದ್ಯಾರ್ಥಿಗಳ ಗಾಯಗಳಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗಿದೆ.

Leave A Reply

Your email address will not be published.