‘SSLC ಮುಖ್ಯ ಪರೀಕ್ಷೆ’ಗೆ ಸಮವಸ್ತ್ರ ಕಡ್ಡಾಯ, ಹಿಜಾಬ್ ಧರಿಸಿ ಬಂದರೆ ಪ್ರವೇಶವಿಲ್ಲ – ಶಿಕ್ಷಣ ಇಲಾಖೆ ಮಹತ್ವದ ಆದೇಶ !

ದಿನಾಂಕ 28-03-2022 ರಿಂದ ದಿನಾಂಕ 11-04 2022 ರವರೆಗೆ ನಡೆಯಲಿರು ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆಗೆ ವಿದ್ಯಾರ್ಥಿಗಳು ಸಮವಸ್ತ್ರವನ್ನು ಧರಿಸಿ ಬರುವುದು ಕಡ್ಡಾಯವಾಗಿದೆ. ಒಂದು ವೇಳೆ ವಸ್ತ್ರ ಸಂಹಿತೆಯನ್ನು ಪಾಲಿಸದೇ ಇದ್ದರೇ ಪರೀಕ್ಷೆಗೆ ನೋ ಎಂಟ್ರಿ ಎಂಬುದಾಗಿ ಶಿಕ್ಷಣ ಇಲಾಖೆ ಆದೇಶದಲ್ಲಿ ತಿಳಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸರ್ಕಾರ ನಿಗದಿಪಡಿಸಿರುವ ಶಾಲಾ ಸಮವಸ್ತ್ರವನ್ನು ವಿದ್ಯಾರ್ಥಿಗಳು ಕಡ್ಡಾಯವಾಗಿ ಧರಿಸತಕ್ಕದ್ದು ಹಾಗೂ ಖಾಸಗಿ ಶಾಲೆಗಳಲ್ಲಿ ಆಯಾ ಆಡಳಿತ ಮಂಡಳಿಗಳು ನಿರ್ಧರಿಸುವ ಸಮವಸ್ತ್ರವನ್ನು ವಿದ್ಯಾರ್ಥಿಗಳು ಧರಿಸತಕ್ಕದ್ದು ಎಂದು ಆದೇಶಿಸಲಾಗಿದೆ. ಹೈಕೋರ್ಟ್ ನಲ್ಲಿ ಸಲ್ಲಿಕೆಯಾಗಿದ್ದಂತ ರಿಟ್ ಅರ್ಜಿಯ ತೀರ್ಪಿನಲ್ಲಿಯೂ ಸರ್ಕಾರದ ಆದೇಶಗಳನ್ನು ಸಿಂಧುಗೊಳಿಸಿರುತ್ತದೆ ಎಂದಿದ್ದಾರೆ.

Leave A Reply

Your email address will not be published.