ಮಾರ್ಚ್ 28 ಮತ್ತು 29 ರಂದು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದ ಕೇಂದ್ರ ಕಾರ್ಮಿಕ ಸಂಘಟನೆ!!

ನವದೆಹಲಿ:ಸರ್ಕಾರದ ನೀತಿಗಳು ಕಾರ್ಮಿಕರಿಗೆ,ರೈತ ಮತ್ತು ಜನರ ಮೇಲೆ ಪರಿಣಾಮ ಬೀರುವುದನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯು ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

ಹೆಚ್ಚಿದ ನಿರುದ್ಯೋಗ, ಕಡಿಮೆಯಾದ ವೇತನ,ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಖಾಸಗೀಕರಣ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಸೇರಿದಂತೆ ಇತರ ಸಮಸ್ಯೆಗಳ ವಿರುದ್ಧ ಪ್ರತಿಭಟಿಸಲು ಸಂಘಟನೆಯು ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಮಾರ್ಚ್ 28 ಮತ್ತು 29 ರಂದು ಸೇರಲಿದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ
(ಎಐಬಿಇಎ)ಫೇಸ್‌ಬುಕ್‌ನಲ್ಲಿ ತಿಳಿಸಿದೆ.


Ad Widget

Ad Widget

Ad Widget

ಬ್ಯಾಂಕ್ ಎಂಪ್ಲಾಯೀಸ್ ಫೆಡರೇಶನ್ ಆಫ್ ಇಂಡಿಯಾ
(ಬಿಇಎಫ್‌ಐ) ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಒಎ) ಸೇರಿದಂತೆ ಇತರ ಕೇಂದ್ರೀಯ ಒಕ್ಕೂಟಗಳು ಸಹ ಪ್ರತಿಭಟನೆಯಲ್ಲಿ ಪಾಲ್ಗೊಂಡಿವೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) ಇದೇ ರೀತಿಯ ಸೂಚನೆಯನ್ನು ನೀಡಿದೆ ಮತ್ತು ಬ್ಯಾಂಕ್ ಮುಷ್ಕರದ ಕಾರಣ ನೀಡಿ ಈ ದಿನಾಂಕಗಳಲ್ಲಿ ತನ್ನ ಸೇವೆಗಳಲ್ಲಿ ತೊಂದ್ರೆಯಾಗಲಿದೆ ಅಂತ ತಿಳಿಸಿದೆ.

ಬ್ಯಾಂಕ್‌ಗಳ ಹೊರತಾಗಿ ಕಲ್ಲಿದ್ದಲು, ಉಕ್ಕು, ತೈಲ, ಟೆಲಿಕಾಂ, ಅಂಚೆ, ಆದಾಯ ತೆರಿಗೆ, ತಾಮ್ರ, ಬ್ಯಾಂಕ್‌ಗಳು, ವಿಮೆ ಸೇರಿದಂತೆ ಇತರ ವಲಯಗಳ ಒಕ್ಕೂಟಗಳು ಮುಷ್ಕರಕ್ಕೆ ಬೆಂಬಲ ನೀಡಿದೆ. ರೈಲ್ವೆ ಮತ್ತು ರಕ್ಷಣಾ ವಲಯದ ಒಕ್ಕೂಟಗಳು ಹಲವಾರು ಸ್ಥಳಗಳಲ್ಲಿ ಮುಷ್ಕರವನ್ನು ಬೆಂಬಲಿಸಲು ಸಾಮೂಹಿಕ ಸಜ್ಜುಗೊಳಿಸಲಿವೆ ಎಂದು ಕಾರ್ಮಿಕ ಸಂಘಟನೆಗಳ ವೇದಿಕೆ ತಿಳಿಸಿದೆ.

Leave a Reply

error: Content is protected !!
Scroll to Top
%d bloggers like this: