ಭೂ ರಹಿತ SC- ST ವರ್ಗದವರಿಗೆ ಸಿಹಿಸುದ್ದಿ ನೀಡಿದ ರಾಜ್ಯ ಸರಕಾರ !
ಬೆಂಗಳೂರು : ಭೂ ರಹಿತ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ (SC-ST) ವರ್ಗದ ಕೃಷಿ ಕಾರ್ಮಿಕ ಕುಟುಂಬಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಎಸ್ಸಿ, ಎಸ್ಟಿ ಕೃಷಿ ಕಾರ್ಮಿಕ ಕುಟುಂಬಗಳಿಗೆ ಜಮೀನು ಕೊಡಲು ಡಾ| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸಲಾಗುತ್ತಿರುವ ಭೂ ಒಡೆತನ ಯೋಜನೆಯ ಅನುಷ್ಠಾನಕ್ಕೆ ಹೊಸ ಮಾರ್ಗಸೂಚಿಗಳನ್ನು ತರಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಎಸ್ಸಿ, ಎಸ್ಟಿ ಜನಸಂಖ್ಯೆ ಹೆಚ್ಚಿರುವ ಕಡೆ ಕಡಿಮೆ ಭೂಮಿ ಹಂಚಿಕೆ ಆಗಿದೆ. ಜನಸಂಖ್ಯೆ ಕಡಿಮೆ ಇರುವ ಕಡೆ ಹೆಚ್ಚು ಭೂಮಿ ಹಂಚಿಕೆ ಆಗಿದೆ. ಮಂಜೂರಾದ ಜಮೀನು ಹಸ್ತಾಂತರ ಆಗಿರುವುದಿಲ್ಲ. ಇಂತಹ ಅನೇಕ ಸಮಸ್ಯೆಗಳಿವೆ. ಹಾಗಾಗಿ, ಭೂಒಡೆತನ ಯೋಜನೆ ಅನುಷ್ಠಾನಕ್ಕೆ ಹೊಸ ಮಾರ್ಗಸೂಚಿಗಳನ್ನು ತರಲಾಗುವುದು ಎಂದು ಹೇಳಿದ್ದಾರೆ.
ಇನ್ನು ಜಮೀನು ದುರ್ಬಳಕೆ ಆಗಿದ್ದರೆ ಅಥವಾ ಅಕ್ರಮವೆಸಗಿದ್ದರೆ ತಪ್ಪಿತಸ್ಥರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.