ವಿದ್ಯಾರ್ಥಿಗಳೇ ಗಮನಿಸಿ : ರಾಜ್ಯದಲ್ಲಿ ಜೂನ್ 16 ರಿಂದ ಸಿಇಟಿ ಪ್ರವೇಶ ಪರೀಕ್ಷೆ , ಹೆಚ್ಚಿನ ಮಾಹಿತಿ ಇಲ್ಲಿದೆ

ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶ ಖಾತರಿ ಪಡಿಸುವ ಪರೀಕ್ಷೆ ಸಾಮಾನ್ಯ ಪ್ರವೇಶ ಪರೀಕ್ಷೆ ( ಸಿಇಟಿ) ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಜೂನ್ 16,17, ಮತ್ತು 18 ರಂದು ಪರೀಕ್ಷೆ ನಡೆಯಲಿದೆ.

ಏಪ್ರಿಲ್ 5 ರಿಂದ 20 ರವರೆಗೆ ಸಿಇಟಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಏಪ್ರಿಲ್ 22ರವರೆಗೆ ಶುಲ್ಕ ಪಾವತಿಗೆ ಅವಕಾಶ ಇರುತ್ತದೆ. ಮಾಹಿತಿ ಪರಿಷ್ಕರಣೆಗೆ ಮೇ 2ರಿಂದ 6ರವರೆಗೆ ಅನುಮತಿ ನೀಡಲಾಗಿದೆ. ಮೇ 30ರಿಂದ ಪ್ರವೇಶ ಪತ್ರಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ ಮಾಹಿತಿ ನೀಡಿದರು.

Leave A Reply