ರಾಜ್ಯಾದ್ಯಂತ ನಾಳೆ ರಸ್ತೆಗಿಳಿಯದೆ ಮುಷ್ಕರ ನಡೆಸಲಿದೆ ಕರ್ನಾಟಕ ಸಾರಿಗೆ!!

ಬೆಂಗಳೂರು:2021 ರಲ್ಲಿ ಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡ ಸಾರಿಗೆ ನೌಕರರನ್ನು ಪುನಃ ಸೇವೆಗೆ ನೇಮಿಸಿಕೊಳ್ಳಬೇಕು ಎಂದು ಮಾರ್ಚ್ 29 ರಂದು ಕೆ.ಎಸ್.ಆರ್.ಟಿ.ಸಿ ಹಾಗೂ ಬಿ.ಎಂ.ಟಿ.ಸಿ ಬಸ್ಸುಗಳು ರಸ್ತೆಗೆ ಇಳಿಯದೆ ಧರಣಿ ನಡೆಸುವ ಬಗ್ಗೆ ಮಾಹಿತಿಯೊಂದು ಹರಿದಾಡಿದೆ.

ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸರಕಾರಿ ಹಾಗೂ ಸಾರಿಗೆ ನೌಕರರ ಕುಟುಂಬ ಅಮರಣಾಂತ ಸತ್ಯಾಗ್ರಹ ಕೈಗೊಳ್ಳಲು ಮುಂದಾಗಿದ್ದು, ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಸತ್ಯಾಗ್ರಹ ಕೈಗೊಳ್ಳಲಾಗಿದೆ.

ಅದಲ್ಲದೆ ಸಾರಿಗೆ ಸಚಿವ ಶ್ರೀ ರಾಮುಲು ಅವರ ಬಳ್ಳಾರಿಯ ನಿವಾಸದ ಎದುರಲ್ಲೂ ಧರಣಿ ಸತ್ಯಾಗ್ರಹ ನಡೆಯಲಿದ್ದು, ಕಳೆದ ಬಾರಿಯಂತೆ ಈ ಬಾರಿಯೂ ಮುಷ್ಕರದ ಬಿಸಿ ಪ್ರಯಾಣಿಕರಿಗೆ ತಟ್ಟಲಿದೆ ಎನ್ನುವ ಮಾಹಿತಿ ಹರಿದಾಡಿದೆ.

ರಾಜ್ಯ ರಸ್ತೆ ಸಾರಿಗೆ ನಿಗಮಗಳ ಒಕ್ಕೂಟವು ಬಂದ್ ಗೆ ಬೆಂಬಲ ನೀಡಿದ್ದು, ಸರಕಾರಿ ನೌಕರರ ಎಲ್ಲಾ ಬೇಡಿಕೆಗಳನ್ನು ಈಡೇರಿಸುವ ವರೆಗೆ ಬಂದ್ ಆಗುವ ಎಲ್ಲಾ ಸಾಧ್ಯತೆಗಳಿದ್ದು ತಯಾರಿ ನಡೆದಿದೆ ಎನ್ನಲಾಗಿದೆ.

Leave A Reply