ಕಡಬ: ಐತ್ತೂರು ಸಮೀಪ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಯುವತಿಯ ಅತ್ಯಾಚಾರಕ್ಕೆ ಯತ್ನ!! ಮುಸ್ಲಿಂ ಯುವಕನಿಂದ ಕೃತ್ಯ-ಆರೋಪಿ ಪೊಲೀಸರ ವಶಕ್ಕೆ

0 10

ಕಡಬ: ಕಂಪ್ಯೂಟರ್ ತರಗತಿ ಮುಗಿಸಿ ಮನೆಗೆ ತೆರಳುತ್ತಿದ್ದ ಹಿಂದೂ ಯುವತಿಯೊಬ್ಬಳನ್ನು ಹಿಂಬಾಲಿಸಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಘಟನೆಯೊಂದು ಬೆಳಕಿಗೆ ಬಂದಿದ್ದು ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದ ಬೆನ್ನಲ್ಲೇ ಆರೋಪಿ ಮುಸ್ಲಿಂ ಯುವಕನನ್ನು ವಶಕ್ಕೆ ಪಡೆಯಲಾಗಿದೆ.ಆರೋಪಿಯನ್ನು ಮೋನು ಎಂಬವರ ಪುತ್ರ ಶಕೀರ್ ಎಂದು ಗುರುತಿಸಲಾಗಿದೆ.

ಘಟನೆ ವಿವರ:ಕಡಬ ತಾಲೂಕಿನ ಮರ್ದಾಳ ಸಮೀಪದ ಐತ್ತೂರು ಎಂಬಲ್ಲಿ ಈ ಘಟನೆ ನಡೆದಿದ್ದು, ಎಂದಿನಂತೆ ತರಗತಿ ಮುಗಿಸಿ ಬಸ್ಸಿನಿಂದ ಇಳಿದು ಮನೆಗೆ ತೆರಳುವ ದಾರಿ ಮಧ್ಯೆ ಕಾಮುಕ ಎದುರಾಗಿ, ಕೃತ್ಯ ಎಸಗಲು ಮುಂದಾಗಿದ್ದಾನೆ.

ಕಳೆದ ಮೂರು ದಿನಗಳಿಂದ ಹಿಂಬಾಲಿಸಿ, ಕಿರುಕುಳ ನೀಡುತ್ತಿದ್ದ ಮುಸ್ಲಿಂ ವ್ಯಕ್ತಿಯೊಬ್ಬ ಇಂದು ಅಡ್ಡಗಟ್ಟಿ ಅತ್ಯಾಚಾರಕ್ಕೆ ಯತ್ನಿಸಿದ್ದು, ಕೂಡಲೇ ಯುವತಿ ಆತನ ಕೈಯಿಂದ ತಪ್ಪಿಸಿಕೊಂಡು ಓಡಿದ್ದು, ಈ ವೇಳೆ ಯುವತಿಯ ರಕ್ಷಣೆಗೆ ಬಂದ ಆಕೆಯ ಅತ್ತೆಗೂ ಆರೋಪಿ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ್ದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಸದ್ಯ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದೂರು ದಾಖಲಾದ ಬೆನ್ನಲ್ಲೇ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

Leave A Reply