ಮುಂದಿನ ಐದು ದಿನ ದೇಶದ ಹಲವು ರಾಜ್ಯದಲ್ಲಿ ಉಷ್ಣ ಅಲೆ; ಹವಾಮಾನ ಇಲಾಖೆಯಿಂದ ಮುನ್ನೆಚ್ಚರಿಕೆ
ಈಗಾಗಲೇ ಬೇಸಿಗೆ ಶುರುವಾಗಿದ್ದು, ಹಲವು ರಾಜ್ಯಗಳು ಪ್ರದೇಶಗಳಲ್ಲಿ ಬಿರುಬಿಸಿಲು ಶುರುವಾಗಿದೆ. ಇದರ ಜೊತೆ
ಮುಂದಿನ ಐದು ದಿನಗಳವರೆಗೆ ದೇಶದ ಹಲವು ಭಾಗಗಳಲ್ಲಿ ಉಷ್ಣಅಲೆ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಾರಿ ಸರಾಸರಿ ತಾಪಮಾನಕ್ಕಿಂತ ಮೂರು ಪಟ್ಟು ಜಾಸ್ತಿ.
ದೆಹಲಿಯಲ್ಲಿ ಮಾರ್ಚ್ 28ರಂದು ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ಗೆ ತಲುಪಬಹುದು. ಶುಷ್ಕ ವಾತಾವರಣದ ನಡುವೆ, ಹಗಲಿನಲ್ಲಿ ಬಿಸಿಲಿನ ತಾಪದಿಂದ ಉಷ್ಣತೆಯು ಹೆಚ್ಚಾಗುತ್ತದೆ. ಜನರು ಎಚ್ಚರಿಕೆಯಿಂದ ಇರಬೇಕು ಎಂದು ಐಎಂಡಿ ಎಚ್ಚರಿಕೆ ನೀಡಿದೆ.
ಮಾರ್ಚ್ 31ರವರೆಗೆ ಜಮ್ಮು-ಕಾಶ್ಮೀರ, ಉತ್ತರಾಖಂಡ್, ರಾಜಸ್ಥಾನ, ಗುಜರಾತ್, ಮಧ್ಯಪ್ರದೇಶ, ಹಿಮಾಚಲ ಪ್ರದೇಶ, ಪಂಜಾಬ್ ಮತ್ತು ಹರ್ಯಾಣದ ದಕ್ಷಿಣ ಭಾಗಗಳು ಸೇರಿ ಹಲವೆಡೆ ಉಷ್ಣ ಅಲೆ ಇರಲಿದ್ದು,ಸೌರಾಷ್ಟ್ರ-ಕಚ್ ಸೇರಿ ಇನ್ನೂ ಅನೇಕ ಪ್ರದೇಶಗಳಲ್ಲಿ ಮಾರ್ಚ್ 31ರವರೆಗೂ ಉಷ್ಣ ಗಾಳಿ ಇರಲಿದೆ ಎಂದು ಐಎಂಡಿ (IMD) ತಿಳಿಸಿದೆ.