ಸಿಲಿಕಾನ್ ಸಿಟಿಯಲ್ಲಿ ಗ್ಯಾಂಗ್ ರೇಪ್ : ರಾಷ್ಟ್ರ ಮಟ್ಟದ ಸ್ವಿಮ್ಮರ್ ಗಳಿಂದ ಯುವತಿಯ ಮೇಲೆ ಅತ್ಯಾಚಾರ !

ನಾಲ್ವರು ಕಾಮುಕರು ಸೇರಿ ಯುವತಿಯ ಮೇಲೆ ಗ್ಯಾಂಗ್ ರೇಪ್ ಮಾಡಿರುವ ಘಟನೆಯೊಂದು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಡೆದಿದೆ.

 

ಪಶ್ಚಿಮ ಬಂಗಾಳ ಮೂಲದ ಯುವತಿಯ ಮೇಲೆ ಅತ್ಯಾಚಾರ ನಡೆದಿರೋದಾಗಿ ತಿಳಿದು ಬಂದಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಪಶ್ಚಿಮ ಬಂಗಾಳ ಮೂಲಕ ಯುವತಿಗೆ ರಜತ್ ಎಂಬಾತನ ಪರಿಚಯ ಆಗಿದೆ. ಪರಿಚಯದ ನಂತರ ಮಾರ್ಚ್ 24ರಂದು ರೆಸ್ಟೋರೆಂಟ್ ಗೆ ಕರೆದುಕೊಂಡು ಹೋಗಿದ್ದಂತ ಆತ ತಡರಾತ್ರಿಯಾದ ಕಾರಣ, ನಮ್ಮ ರೂಂಗೆ ಹೋಗೋಣ ಬಾ ಎಂದು ಹೇಳಿ ಕರೆದುಕೊಂಡು ಹೋಗಿದ್ದಾನೆ.

ಈತನನ್ನು ನಂಬಿ ತೆರಳಿದಂತ ಯುವತಿಗೆ ಅಲ್ಲಿದ್ದ ರಜತ್ ನ ಸ್ನೇಹಿತರು ಬೆದರಿಸಿ ಆಕೆಯ ಮೇಲೆ ಸರಣಿ ಅತ್ಯಾಚಾರ ನಡೆಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಸಂಜಯ ನಗರ ಠಾಣೆಗೆ ಯುವತಿ ದೂರು ನೀಡಿದ ಪರಿಣಾಮ, ಪೊಲೀಸರು ದೆಹಲಿ ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ರಜತ್, ಶಿವ್ ರಾಣಾ, ದೇವ್ ಸರೋಯಿ ಮತ್ತು ಯೋಗೇಶ್ ಕುಮಾರ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ರಾಷ್ಟ್ರಮಟ್ಟದ ಸ್ವಿಮ್ಮರ್ ಗಳಾಗಿದ್ದು, ಅಭ್ಯಾಸಕ್ಕಾಗಿ ಬೆಂಗಳೂರಿಗೆ ಬಂದು, ಕೆಲ ವರ್ಷಗಳಿಂದ ಬೆಂಗಳೂರಿನಲ್ಲಿಯೇ ಅಭ್ಯಾಸ ತರಬೇತಿ ಪಡೆಯುತ್ತಿದ್ದರು ಎನ್ನಲಾಗಿದೆ.

Leave A Reply

Your email address will not be published.