ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನೆ ಮೇಲೆ ದಾಳಿ!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಮನೆಯ ಗೇಟ್‌ಗೆ ಭಾರತೀಯ ಜನತಾ ಪಾರ್ಟಿ
ಯುವ ಮೋರ್ಚಾ ಕಾರ್ಯಕರ್ತರು, ಕೇಸರಿ ಬಣ್ಣ ಬಳಿದು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನಾಕಾರರನ್ನು ತಡೆಯಲು ದೆಹಲಿ ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ.


Ad Widget

Ad Widget

Ad Widget

ಕಾಶ್ಮೀರಿ ಹಿಂದೂಗಳ ಬಗ್ಗೆ ಸಿಎಂ ಕೇಜ್ರಿವಾಲ್ ಹೇಳಿಕೆಗೆ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಪ್ರತಿಭಟನೆ ವೇಳೆ ಬಿಜೆಪಿ ಯುವ ಮುಖಂಡರು ಕೇಜ್ರಿವಾಲ್ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಈ ಪ್ರತಿಭಟನೆಯಲ್ಲಿ ತೇಜಸ್ವಿ ಸೂರ್ಯ, ಚಾಹಲ್, ವೈಭವ್ ಸಿಂಗ್ ಸೇರಿದಂತೆ ದೆಹಲಿ ಪ್ರದೇಶ ಯುವ ಮೋರ್ಚಾದ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಇತ್ತೀಚೆಗೆ ಬಿಡುಗಡೆಯಾಗಿದ್ದ ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕುರಿತು ಕೇಜ್ರಿವಾಲ್ ವಿರೋಧವಾಗಿ ಹೇಳಿಕೆ ನೀಡಿದ್ದರು. ಇದಕ್ಕಾಗಿ ಅವರ ನಿವಾಸದ ಮುಂದೆ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಭದ್ರತಾ ತಡೆಗೋಡೆ ಹಾಗೂ ಸಿಸಿಟಿವಿ ಕ್ಯಾಮೆರಾಗಳು ಧ್ವಂಸಗೊಂಡಿದೆ ಎಂಬ ಆರೋಪ ಕೇಳಿ ಬಂದಿದೆ.

Leave a Reply

error: Content is protected !!
Scroll to Top
%d bloggers like this: