ಯುಗಾದಿ ಹಬ್ಬಕ್ಕೂ ಮುನ್ನವೇ ನೌಕರರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಸರ್ಕಾರ|ಡಿಎ ಮತ್ತು ಪಿಂಚಣಿದಾರರ ಡಿಆರ್‌ ಹೆಚ್ಚಳ!!

ಕೇಂದ್ರ ಸರ್ಕಾರ ನೌಕರರಿಗೆ ಯುಗಾದಿ ಹಬ್ಬಕ್ಕೆ ಮೊದಲೇ ಸಿಹಿಸುದ್ದಿ ನೀಡಿದ್ದು,ಕೊರೊನಾ ಬಿಕ್ಕಟ್ಟಿನ ಕಾರಣಕ್ಕೆ ಕಳೆದ ಒಂದೂವರೆ ವರ್ಷದಿಂದ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಕೇಂದ್ರ ಸರ್ಕಾರಿ ನೌಕರರ ಡಿಎ ಮತ್ತು ಪಿಂಚಣಿದಾರರ ಡಿಆರ್‌ ನ್ನು ಇದೀಗ ಹೆಚ್ಚಳ ಮಾಡಿದೆ.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು,ನೌಕರರ ಡಿಎ ಮತ್ತು ಪಿಂಚಣಿದಾರರ ಡಿಆರ್‌ ನ್ನು ಶೇ.3 ರಿಂದ ಶೇ.34 ಕ್ಕೆ ಹೆಚ್ಚಳ ಮಾಡಿದೆ ಎಂದು ತಿಳಿಸಿದೆ.ಕೇಂದ್ರ ಸರ್ಕಾರದ ಈ ನಿರ್ಧಾರವು ಜನವರಿ, 2022 ರಿಂದಲೇ ಪೂರ್ವಾನ್ವಯವಾಗಲಿದೆ.


Ad Widget

Ad Widget

Ad Widget

2021 ರ ಜುಲೈ ತಿಂಗಳಲ್ಲಿ ಕೇಂದ್ರ ಸರ್ಕಾರವು ಶೇ.17 ರ ಡಿಎ ಮತ್ತು ಡಿಆರ್ ಅನ್ನು ಶೇ 28ಕ್ಕೆ ಹೆಚ್ಚಳ ಮಾಡಿತ್ತು.2021 ರ ಅಕ್ಟೋಬರ್‌ನಲ್ಲಿ ಮತ್ತೊಮ್ಮೆ ಶೇ.3ರಷ್ಟು ಹೆಚ್ಚಳ ಮಾಡಿದ್ದರಿಂದ ಕೇಂದ್ರ ಸರ್ಕಾರಿ ನೌಕರರ ಡಿಎ ಶೇ.31ಕ್ಕೆ ತಲುಪಿತು.ಕೇಂದ್ರ ಸರ್ಕಾರ ಈಗ ಶೇ.3ರಷ್ಟು ಡಿಎ ಮತ್ತು ಡಿಆರ್ ಹೆಚ್ಚಳ ಮಾಡಿರುವುದರಿಂದ ಸರ್ಕಾರದ ಈ ನಿರ್ಧಾರವು 50 ಲಕ್ಷದಷ್ಟು ಸರ್ಕಾರಿ ನೌಕರರಿಗೆ ಮತ್ತು 65 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಿದೆ.

Leave a Reply

error: Content is protected !!
Scroll to Top
%d bloggers like this: