ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಕಾಶ್ಮೀರದ ವಿದ್ಯಾರ್ಥಿಗಳಿಗೆ ಜಾಮೀನು ಮಂಜೂರು ಮಾಡಿದ ಹೈಕೋರ್ಟ್ !!

ಪಾಕಿಸ್ತಾನ ಪರ ಘೋಷಣೆ ಕೂಗಿದವರಿಗೆ ಇದೀಗ ಜಾಮೀನು ಮಂಜೂರಾಗಿದೆ. ದೇಶದ್ರೋಹದಡಿ ಪ್ರಕರಣ ದಾಖಲಾಗಿದ್ದರೂ ಕೂಡ ಜಾಮೀನು ದೊರೆತಿರುವುದು ಅಚ್ಚರಿಯನ್ನುಂಟು ಮಾಡಿದೆ. ಕಳೆದ ವರ್ಷದ ಟಿ20 ಕ್ರಿಕೆಟ್‌ ವಿಶ್ವಕಪ್‌ ಪಂದ್ಯದಲ್ಲಿ ಭಾರತದ ವಿರುದ್ಧ ಜಯಗಳಿಸಿದ್ದ ಪಾಕಿಸ್ತಾನದ ಪರ ಘೋಷಣೆ ಕೂಗಿದ ಆರೋಪ ಎದುರಿಸುತ್ತಿದ್ದ ಕಾಶ್ಮೀರದ ಮೂವರು ವಿದ್ಯಾರ್ಥಿಗಳಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು ನೀಡಿದೆ.

ಆಗ್ರಾ ಜಿಲ್ಲಾ ವಕೀಲರ ಸಂಘವು ವಿದ್ಯಾರ್ಥಿಗಳ ಪರವಾಗಿ ವಾದ ಮಂಡಿಸುವುದರ ವಿರುದ್ಧ ನಿರ್ಣಯ ಅಂಗೀಕರಿಸಿದ ಬಳಿಕ ಆರೋಪಿತ ವಿದ್ಯಾರ್ಥಿಗಳು 2021ರ ಡಿಸೆಂಬರ್‌ನಲ್ಲಿ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಆಗ್ರಾದಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ಅರ್ಷೀದ್ ಯೂಸುಫ್, ಇನಾಯತ್ ಅಲ್ತಾಫ್ ಶೇಖ್ ಮತ್ತು ಶೋಕತ್ ಅಹ್ಮದ್ ಗನೈ ಎಂಬ ಮೂವರು ವಿದ್ಯಾರ್ಥಿಗಳನ್ನು ಉತ್ತರ ಪ್ರದೇಶ ಪೊಲೀಸರು ಅಕ್ಟೋಬರ್ 27 ರಂದು ಬಂಧಿಸಿದ್ದರು. ಇವರ ವಿರುದ್ಧ ಸೆಕ್ಷನ್‌ 124ಎ (ದೇಶದ್ರೋಹ), 153-ಎ (ಭಿನ್ನ ಗುಂಪುಗಳ ನಡುವೆ ವೈರತ್ವಕ್ಕೆ ಪ್ರಚಾರ), 505 (1) (B) (ಸಾರ್ವಜನಿಕ ಕಿಡಿಗೇಡಿತನ) ಹಾಗೂ ಭಾರತೀಯ ದಂಡ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆ ಸೆಕ್ಷನ್‌ 66-ಎಫ್‌ ಅಡಿ ಪ್ರಕರಣ ದಾಖಲಿಸಲಾಗಿತ್ತು.

ನಮ್ಮ ವಿರುದ್ಧ ಯಾವುದೇ ಪುರಾವೆಗಳಿಲ್ಲ. ದೇಶದ್ರೋಹ ಅಥವಾ ಸಮುದಾಯಗಳ ನಡುವೆ ದ್ವೇಷವನ್ನು ಉತ್ತೇಜಿಸಲು ನಾವು ಯಾವುದೇ ಅಪರಾಧ ಮಾಡಿಲ್ಲ ಎಂದು ವಾದಿಸಿ ಮೂವರು ಆರೋಪಿಗಳು ನ್ಯಾಯಾಲಯದ ಮೆಟ್ಟಿಲೇರಿದ್ದರು.

ಅರ್ಜಿದಾರರು, ಕೇದಾರ್ ನಾಥ್ ಸಿಂಗ್ ವರ್ಸಸ್ ಸ್ಟೇಟ್ ಆಫ್ ಬಿಹಾರದಲ್ಲಿನ ತೀರ್ಪಿನ ಬಗ್ಗೆ ಉಲ್ಲೇಖಿಸಿದ್ದರು. ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯದ ಹಕ್ಕು ಸಂವಿಧಾನವು ಆರ್ಟಿಕಲ್ 19(1)(ಎ) ಅಡಿಯಲ್ಲಿ ಖಾತರಿಪಡಿಸಿದ ಮೂಲಭೂತ ಹಕ್ಕು ಎಂದು ವಾದಿಸಿದ್ದರು.

Leave A Reply

Your email address will not be published.