ಕೇಂದ್ರಸಚಿವ ಅಮಿತ್ ಶಾ ಸಂಚರಿಸುವ ಮಾರ್ಗದಲ್ಲಿ ಅವಘಡ!

ರಾಜ್ಯಕ್ಕೆ ಆಗಮಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಲವು ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ. ಈ ನಡುವೆ ಅಮಿತ್ ಶಾ ತೆರಳ ಬೇಕಿದ್ದ ಮಾರ್ಗದಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ರಾಜ್ಯಕ್ಕಾಗಿಮಿಸಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತೆರಳಬೇಕಿದ್ದ ಮಾರ್ಗದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ದಿಢೀರ್‌ ಮಾರ್ಗ ಬದಲಾವಣೆ ಮಾಡಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅಮಿತ್ ಶಾ ಒಂದೇ ಕಾರಿನಲ್ಲಿ ಪ್ರಯಾಣಿಸಲು ಸಿದ್ಧವಾಗುತ್ತಿದ್ದಾಗ ಈ ಅವಘಡದ ಬಗ್ಗೆ ಮಾಹಿತಿ ಸಿಕ್ಕಿದೆ. ಕೇಂದ್ರ ಸಚಿವ ಅಮಿತ್ ಶಾ ಅರಮನೆ ಮೈದಾನಕ್ಕೆ ತೆರಳಬೇಕಿದ್ದ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ. 

ಇನ್ನು ಇದಕ್ಕೂ ಮುನ್ನ ಚಿಕ್ಕಬಳ್ಳಾಪುರ ತಾಲೂಕಿನ ಮುದ್ದೇನಹಳ್ಳಿಯಲ್ಲಿನ ಸತ್ಯಸಾಯಿ ಆಶ್ರಮದ ಆವರಣದಲ್ಲಿ ಇಂದು 400 ಹಾಸಿಗೆಗಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾಮಗಾರಿಗೆ ಅಮಿತ್‌ ಶಾ ಶಿಲಾನ್ಯಾಸ ನೆರವೇರಿಸಿದರು. ನಂತರ ಅಮಿತ್ ಶಾ ಅವರು ಅರಮನೆ ಮೈದಾನಕ್ಕೆ ತೆರಳಬೇಕಿದ್ದ ಮಾರ್ಗ ಮಧ್ಯೆ ಬೆಂಕಿ ಅವಘಡ ಸಂಭವಿಸಿದ್ದು, ಮೌಂಟ್ ಕಾರ್ಮೆಲ್ ಕಾಲೇಜು ಬಳಿ ರಸ್ತೆಯಲ್ಲಿ ಕೇಬಲ್ ಗೆ ಬೆಂಕಿ ಹೊತ್ತಿಕೊಂಡಿದೆ.

ಡ್ರೈನ್ ಮೇಲೆ ಕಾರು ಹೋದಾಗ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಅಂಡರ್ ಗ್ರೌಂಡ್ ಎಲೆಕ್ಟ್ರಿಕ್ ಕೇಬಲ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಹಾಗೂ ಇನ್ನಿತರ ಪೊಲೀಸ್ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡ ಹಿನ್ನೆಲೆಯಲ್ಲಿ ಅರಮನೆ ಮೈದಾನಕ್ಕೆ ತೆರಳಬೇಕಿದ್ದ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.

ಘಟನಾ ಸ್ಥಳಕ್ಕೆ ಬೆಂಗಳೂರು ನಗರ ಪೊಲೀಸ್​ ಕಮಿಷನರ್ ಕಮಲ್ ಪಂತ್ ಭೇಟಿ ನೀಡಿದ್ದಾರೆ. ಘಟನಾ ಸ್ಥಳ ವೀಕ್ಷಿಸಿದ ಕಮಲ್ ಪಂತ್ ಸುರಕ್ಷತಾ ಕ್ರಮಗಳನ್ನು ಬಿಗಿಗೊಳಿಸಿದರು. ಶಾಂಗ್ರಿಲಾ ಹೋಟೆಲ್ ಮುಂಭಾಗದಲ್ಲೇ ಇದ್ದಕ್ಕಿದ್ದಂತೆ ಬ್ಲಾಸ್ಟ್ ರೀತಿ ಅವಘಡ ಸಂಭವಿಸಿದೆ. ಸ್ಫೋಟದಿಂದ ಫುಟ್ ಪಾತ್ ಗೆ ಅಳವಡಿಸಿದ್ದ ಪವರ್ ಚೇಂಬರ್ ಕಿತ್ತು ಬಂದಿದೆ. ಬದಲಾದ ಮಾರ್ಗದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜೊತೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್​ ಶಾ ಅವರು ಬೆಂಗಳೂರಿನ ವಸಂತನಗರದಲ್ಲಿರುವ ಶಾಂಗ್ರಿಲಾ ಹೋಟೆಲ್​ ತಲುಪಿದ್ದಾರೆ.

Leave A Reply

Your email address will not be published.