ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ !!!

ಬೆಂಗಳೂರು ಮಾಜಿ ಪೊಲೀಸ್ ಆಯುಕ್ತ ಮತ್ತು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರು ಐಪಿಎಸ್ ಸೇವೆಗೆ ಗುಡ್ ಬೈ ಹೇಳಿದ್ದಾರೆ.

ಐಪಿಎಸ್ ಸೇವೆಗೆ ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿ ಕೋರಿ 2021 ರ ಸೆಪ್ಟೆಂಬರ್ 16 ರಂದು ಅರ್ಜಿ ಸಲ್ಲಿಸಿದ್ದರು. 6 ತಿಂಗಳಾದರೂ ಸಚಿವಾಲಯದಿಂದ ಉತ್ತರ ಬಾರದ ಕಾರಣ ಆಲ್ ಇಂಡಿಯಾ ಸರ್ವಿಸ್ ಆಕ್ಟ್ 16( 2) ನಡಿ ಸೇವೆಗೆ ಭಾಸ್ಕರ್ ರಾವ್ ಗುಡ್ ಬೈ ಹೇಳಿದ್ದಾರೆ.

ಆಕ್ಟ್ ಪ್ರಕಾರ ನಿವೃತ್ತಿ ಕೋರಿದ ಅಧಿಕಾರಿ ವಯಸ್ಸು 50 ವರ್ಷ ದಾಟಿರಬೇಕು. 20 ವರ್ಷ ಸೇವೆಯನ್ನು ಪೂರ್ಣಗೊಳಿಸಬೇಕು. ನಿವೃತ್ತಿಗೆ ಮನವಿ ಸಲ್ಲಿಸುವಾಗ ಅಮಾನತಿನಲ್ಲಿ ಇರಬಾರದು. ಭಾಸ್ಕರ್ ರಾವ್ ಅವರು ಕಾಯ್ದೆಯಡಿ ನಿವೃತ್ತಿಗೆ ಅರ್ಹರಿರುವ ಕಾರಣ ಅಧಿಕೃತವಾಗಿ ಸೇವೆಗೆ ಗುಡ್ ಬೈ ಹೇಳಿದ್ದಾರೆನ್ನಲಾಗಿದೆ.

1954ರಂದು ಜನಿಸಿದ ಭಾಸ್ಕರ್ ರಾವ್ ಅವರು 2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ, ಆಂತರಿಕ ಭದ್ರತಾ ವಿಭಾಗದಲ್ಲಿ ಕೂಡ ಕೆಲಸ ನಿರ್ವಹಿಸಿದ್ದರು. ಪ್ರಸ್ತುತ ರೈಲ್ವೆ ಪೊಲೀಸ್ ವಿಭಾಗದ ಎಡಿಜಿಪಿ ಆಗಿ ಸೇವೆ ಸಲ್ಲಿಸುತ್ತಿದ್ದರು.

Leave A Reply

Your email address will not be published.