ಪುತ್ತೂರು :ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ವಿಧಿವಶ

Share the Article

ಪುತ್ತೂರು: ದರ್ಬೆ ಬೈಪಾಸ್ ನಲ್ಲಿ ಕೆಲವು ದಿನಗಳ ಹಿಂದೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ವಿಧಿವಶರಾಗಿದ್ದಾರೆ.

ಅಪಘಾತದ ಬಳಿಕ ಗಂಭೀರ ಗಾಯಗೊಂಡಿದ್ದ ಸಂಟ್ಯಾರಿನ ಕೈಕಾರ ನಿವಾಸಿ ರಾಜೇಶ್ ನಾಯ್ಕ (24)ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಮೃತರು ತಾಯಿ, ಅಕ್ಕ, ಅಣ್ಣಂದಿರು ಹಾಗೂ ಕುಟುಂಬದವರನ್ನು ಅಗಲಿದ್ದಾರೆ.

Leave A Reply