ಮಧ್ಯಾಹ್ನ ಬಿಸಿಯೂಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು : ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ!

ತುಮಕೂರು ಸಿದ್ಧಗಂಗಾ ಮಠದಲ್ಲಿ ಗುರುವಂದನ ಕಾರ್ಯಕ್ರಮ ನಡೆಸಲಾಗುತ್ತಿದೆ. ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ 115 ನೇ ಜಯಂತಿ ಹಿನ್ನೆಲೆ ತುಮಕೂರಿನಲ್ಲಿ ಹಬ್ಬದ ವಾತಾವರಣ ಇದೆ. ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಹಿತ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.

‘ನಡೆದಾಡುವ ದೇವರ ಬಸವ ಭಾರತ’ ಹೆಸರಿನಲ್ಲಿ ಕಾರ್ಯಕ್ರಮ ನಡೆಸಲಾಗುತ್ತಿದೆ.

ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡುತ್ತಾ, ‘ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ನೆಲೆಸಿದ ಈ ನೆಲದಲ್ಲಿ ಸ್ಫೂರ್ತಿ, ಹೆಮ್ಮೆ ಇದೆ. ಸುಮಾರು 88 ವರ್ಷ ಈ ಮಠದ ಸೇವೆ ಮಾಡಿದ್ದಾರೆ. ಇದು ದಾಖಲೆ. ಇಡಿ ದೇಶದಲ್ಲೇ ಇಂತಹ ಕೆಲಸವನ್ನು ಯಾರು ಮಾಡಿಲ್ಲ. ಆದರೆ ಆ ದಾಖಲೆ ನಮ್ಮ ಶಿವಕುಮಾರ ಸ್ವಾಮಿಗಳು ಮಾಡಿದ್ದಾರೆ. ಶ್ರೀಗಳು ಹಚ್ಚಿದ ಒಲೆಯ ಕಿಚ್ಚು ನಿರಂತರವಾಗಿ ನಡೆಯುತ್ತಿವೆ. ಅವರು ನಮ್ಮ ನಡುವೆ ಜೀವಂತವಾಗಿದ್ದಾರೆ. ಅವರು ದೈಹಿಕವಾಗಿ ಇಲ್ಲದೆ ಇದ್ದರೂ ಅವರ ನಡೆ ಗೌರವ ನಮ್ಮ ಜೊತೆ ಸದಾ ಇರುತ್ತದೆ. ಬದುಕನ್ನು ಕಟ್ಟಿಕೊಟ್ಟ ಪರಮಪೂಜ್ಯರು ಅವರು ಎಲ್ಲಾ ಸಮುದಾಯದ ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಅದು ಸಾಮಾನ್ಯ ಮಾತಲ್ಲ. ಅದು ದೈವ ಶಕ್ತಿ. ಸ್ವಾಮೀಜಿಯವರು ಯಾವುದೇ ಜಾತಿ ಬೇದ ಮಾಡಿಲ್ಲ. ಸರ್ವೋದಯ ಅಂತ್ಯೋದಯ ಆಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ವೇಳೆ, ಸರ್ಕಾರದ ಮಧ್ಯಾಹ್ನದ ಬಿಸಿ
ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು ಇಡಲು ಸರ್ಕಾರ ಮುಂದಾಗುತ್ತೆ ಎಂದು ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಮಧ್ಯಾಹ್ನದ ಬಿಸಿ ಊಟದ ಯೋಜನೆಗೆ ಶಿವಕುಮಾರ ಸ್ವಾಮೀಜಿ ಹೆಸರು ಇಡಲು ಸರ್ಕಾರ ಮುಂದಾಗುತ್ತೆ. ಅವರು ಕಷ್ಟದಲ್ಲಿರುವವರಿಗೆ ಬದುಕು ಕಟ್ಟಿಕೊಡುತ್ತಿದ್ದರು. ಮಧ್ಯಾಹ್ನದ ಬಿಸಿಯೂಟದ ಯೋಜನೆಗೆ ಶಿವಕುಮಾರ ಸ್ವಾಮೀಜಿಗಳ ಹೆಸರನ್ನ ಇಡಲಾಗುವುದು. ಈ ಬಗ್ಗೆ ಆದೇಶ ಹೊರಡಿಸುತ್ತೇನೆ ಎಂದು ಕಾರ್ಯಕ್ರಮದಲ್ಲಿ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

Leave A Reply

Your email address will not be published.