ಉಡುಪಿ: ಮಾನವ ಹಕ್ಕುಗಳ ಪ್ರತಿಷ್ಠಾನದ ಡಾ. ರವೀಂದ್ರನಾಥ್ ಶಾನುಭಾಗ್ ಅವರಿಗೆ ಹೃದಯಾಘಾತ

0 11

ಮಾನವ ಹಕ್ಕುಗಳ ರಕ್ಷಣಾ ಪ್ರತಿಷ್ಠಾನದ ಹಿರಿಯ ನಾಗರೀಕರ ಹಕ್ಕುಗಳ ಹೋರಾಟಗಾರ, ಡಾ. ರವೀಂದ್ರನಾಥ ಶಾನುಭಾಗ್ ಅವರಿಗೆ ಹೃದಯಾಘಾತವಾಗಿದ್ದು, ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಗುರುವಾರ ರಾತ್ರಿ ಮಣಿಪಾಲದ ಮನೆಯಲ್ಲಿ ಶಾನುಭಾಗ್ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಕುಟುಂಬಸ್ಥರು ಅವರನ್ನು ಮಣಿಪಾಲದ ಕಸ್ತೂರ್ಬಾ ಮೆಡಿಕಲ್ ಕಾಲೇಜಿಗೆ ದಾಖಲು ಮಾಡಿದ್ದಾರೆ. ಆಂಜಿಯೋಪ್ಲಾಸ್ಟ್ ಮಾಡಲಾಗಿದ್ದು, ಶಾನುಭಾಗ್ ಚಿಕಿತ್ಸೆ ಗೆ ಸ್ಪಂದಿಸುತ್ತಿದ್ದಾರೆ. ಸ್ಟಂಟ್ ಅಳವಡಿಸಲಾಗಿದ್ದು, ತಜ್ಞ ವೈದ್ಯರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ.

ಶಾನುಭಾಗ್ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಪೂರಕವಾಗಿ ಸ್ಪಂದಿಸುತ್ತಿದ್ದಾರೆ. ಎರಡು ಮೂರು ದಿನಗಳ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಬಹುದು ಎಂದು ಕೆಎಂಸಿ ಅಧೀಕ್ಷಕ ಮಾಹಿತಿ ನೀಡಿದ್ದಾರೆ.

Leave A Reply