ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ !! | ಎಸ್‌ಎಸ್‌ಸಿ ಯಿಂದ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

0 4

ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣಾವಕಾಶವೊಂದಿದೆ. ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ಬಹುಕಾರ್ಯಕ (ತಾಂತ್ರಿಕವಲ್ಲದ) ಸಿಬ್ಬಂದಿ ಮತ್ತು ಹವಾಲ್ದಾರ್‌ಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆ.

ನೇಮಕಾತಿ ಪರೀಕ್ಷೆಯು ಕಂಪ್ಯೂಟರ್ ಆಧಾರಿತ ಮುಕ್ತ ಪರೀಕ್ಷೆಯಾಗಿದ್ದು, ಜುಲೈ ತಿಂಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಅರ್ಜಿ ಸಲ್ಲಿಸಲು ಏಪ್ರಿಲ್-30 ಕೊನೆಯ ದಿನವಾಗಿದ್ದು, ಆನ್‌ಲೈನ್ ನಲ್ಲಿ ಮಾತ್ರ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಮತ್ತು ವಿದ್ಯಾರ್ಹತೆ, ವಯೋಮಿತಿ ಹಾಗೂ ಶುಲ್ಕ ಸೇರಿದಂತೆ ಹೆಚ್ಚಿನ ವಿವರಗಳಿಗಾಗಿ ಮತ್ತು ಸೂಚನೆಗಳಿಗೆ https://ssc.nic.in ಅಥವಾ www.ssckkr.kar.nic.in ಗೆ ಭೇಟಿ ನೀಡಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ: 080-25502520, 9483862020 ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply