ಪಿಯು ಪ್ರಶ್ನೆ ಪತ್ರಿಕೆ ಲೀಕ್!!|ಪಿ.ಯು. ಮಂಡಳಿಯ ಪರೀಕ್ಷಾ ವಿಭಾಗದಿಂದ ಕರೆ ಮಾಡುತ್ತಿರುವುದಾಗಿ ಪ್ರಾಂಶುಪಾಲರಿಗೆ ಹುಸಿ ಕರೆ

0 13

ಕಾರ್ಕಳ: ಪಿಯು ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ನಿಮ್ಮಲ್ಲಿರುವ ಪತ್ರಿಕೆ ಪರಿಶೀಲನೆಗೆ ವಾಟ್ಸಪ್ ಗೆ ಕಳುಹಿಸಿ ಎಂದು ಮಹಿಳೆಯೊಬ್ಬರು ಕಾರ್ಕಳದ ಬೆಕ್ಷ್ಮಣ್ ಸರಕಾರಿ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರಿಗೆ ಹುಸಿ ಕರೆ ಮಾಡಿರುವ ಘಟನೆ ನಡೆದಿದೆ.

ಕಾಲೇಜಿನ ಪ್ರಾಂಶುಪಾಲರು ವಿಷ್ಣುಮೂರ್ತಿಮಯ್ಯ ಎಂಬವರ ಮೊಬೈಲ್‌ಗೆ ಮಹಿಳೆಯೊಬ್ಬರು ಮಾ.30 ರಂದು ಕರೆ ಮಾಡಿ, ತಾನು ಪಿ.ಯು. ಮಂಡಳಿಯ ಪರೀಕ್ಷಾ ವಿಭಾಗದಿಂದ ಕರೆ ಮಾಡುತ್ತಿರುವುದಾಗಿ ಹೇಳಿಕೊಂಡಿದ್ದರು. ಮಾ.31ರಂದು ನಡೆಯುವ ಬಯೋಲಜಿ ಪ್ರಶ್ನೆ ಪತ್ರಿಕೆ ಬಯಲಾಗಿದ್ದು, ಉಳಿದ ಇಂಗ್ಲೀಷ್, ವಿಜ್ಞಾನ ವಿಭಾಗದ ಪ್ರಶ್ನೆ ಪತ್ರಿಕೆ ಕೂಡ ಬಯಲಾಗಿದೆ.ನಿಮ್ಮಲ್ಲಿ ಇರಿಸಲಾದ ಪ್ರಶ್ನೆ ಪತ್ರಿಕೆಗಳನ್ನು ಪರಿಶೀಲನೆ ಮಾಡುವ ಬಗ್ಗೆ ನನ್ನ ವಾಟ್ಸಾಪ್‌ಗೆ ಕಳುಹಿಸಿ ಎಂದು ತಿಳಿಸಿದರು.

ಅನುಮಾನಗೊಂಡ ಪ್ರಾಂಶುಪಾಲರು ಕರೆ ಮಾಡಿದ ವ್ಯಕ್ತಿಯ ಹೆಸರು ವಿಚಾರಿಸುವಾಗ ಆಕೆ, ತನ್ನ
ಹೆಸರನ್ನು ಹೇಳದೆ ಫೋನ್ ಕರೆಯನ್ನು ಕಟ್ ಮಾಡಿದ್ದು,ಯಾರೋ ಮಹಿಳೆ ಪಿ.ಯು. ಮಂಡಳಿಯವರು ಎಂದು ಸುಳ್ಳು ಹೇಳಿ ಹುಸಿ ಕರೆ ಮಾಡಿರುವುದಾಗಿ ದೂರು ದಾಖಲಿಸಿದ್ದಾರೆ.ಈ ಬಗ್ಗೆ ಕಾರ್ಕಳ ಗ್ರಾಮಾಂತರ
ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply