SC, ST ಬಡ್ತಿ ಮೀಸಲಾತಿ ರದ್ದು ಬೇಡ | ಕೇಂದ್ರದಿಂದ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ !!!
ಸರ್ಕಾರಿ ನೌಕರಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಿಬ್ಬಂದಿಗೆ ಇರುವ ಬಡ್ತಿ ಮೀಸಲಾತಿಯನ್ನು ರದ್ದುಗೊಳಿಸದಂತೆ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಿದೆ.
ಸುಪ್ರೀಂ ಕೋರ್ಟ್ ನಿಂದ ಪರಿಶಿಷ್ಟರ ಬಡ್ತಿ ಮೀಸಲಾತಿ ನೀತಿ ಸ್ಥಗಿತಗೊಳಿಸುವ ಬಗ್ಗೆ ಸ್ಪಷ್ಟನೆ ಕೇಳಲಾಗಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ಅಫಿಡವಿಟ್ ಸಲ್ಲಿಸಿದೆ.
ಸರ್ಕಾರಿ ನೌಕರಿಯಲ್ಲಿ ಪರಿಶಿಷ್ಟ ಜಾತಿ ಪಂಗಡದವರಿಗೆ ಮೀಸಲಾತಿ ಸ್ಥಗಿತಗೊಳಿಸುವ ಕ್ರಮ ಉಚಿತವಲ್ಲ ಎಂದು ಹೇಳಲಾಗಿದೆ.
ಕೇಂದ್ರದಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರರಾವ್ ಮತ್ತು ಬಿ.ಆರ್ ಗವಾಯಿ ಅವರನ್ನೊಳಗೊಂಡ ಪೀಠದ ಎದುರು ಅಫಿಡವಿಟ್ ಸಲ್ಲಿಕೆ ಮಾಡಿದ್ದು, ಪರಿಶಿಷ್ಟ ಜಾತಿ ಮತ್ತು ಪಂಗಡದ ನೌಕರರಿಗೆ ಬಡ್ತಿ ಮೀಸಲಾತಿ ಯಥಾಸ್ಥಿತಿಯಲ್ಲಿ ಮುಂದುವರೆಸಬೇಕು. ಇಲ್ಲದಿದ್ದರೆ ಅನೇಕ ಸಮಸ್ಯೆಗಳು ಎದುರಾಗುತ್ತವೆ. ಸಿಬ್ಬಂದಿ ವೇತನ ಮತ್ತು ಪಿಂಚಣಿ ಮರುಹೊಂದಾಣಿಕೆ ಮಾಡಬೇಕಾಗುತ್ತದೆ. ನಿವೃತ್ತರಿಗೆ ನೀಡಿರುವ ವೇತನ ಮತ್ತು ಪಿಂಚಣಿಯ ಹೆಚ್ಚಿನ ಭಾಗವನ್ನು ವಸೂಲಿ ಮಾಡಬೇಕಾಗುತ್ತದೆ. ಇದರಿಂದ ಸಿಬ್ಬಂದಿ ನಡುವೆ ಅಶಾಂತಿ ಸೃಷ್ಟಿಯಾಗುತ್ತದೆ. ತಕರಾರುಗಳಿಗೆ ಕಾರಣವಾಗುತ್ತದೆ. ಹಾಗಾಗಿ ಬಡ್ತಿ ಮೀಸಲು ರದ್ದು ಮಾಡುವುದು ಬೇಡವೆಂದು ಕೇಂದ್ರ ಸರ್ಕಾರ ಹೇಳಿದೆ.