ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ !!!

ಆರ್ಥಿಕ ಬಿಕ್ಕಟ್ಟಿನ ಪರಿಣಾಮ ಶ್ರೀಲಂಕಾದಲ್ಲಿ ಜನರು ದಂಗೆ ಎದ್ದಿರುವ ಬೆನ್ನಲ್ಲೇ ಲಂಕಾ ಅಧ್ಯಕ್ಷ ಗೋತಬಯ ರಾಜಪಕ್ಸೆ ಅವರು ಶುಕ್ರವಾರ ತುರ್ತು ಪರಿಸ್ಥಿತಿಯನ್ನು ಘೋಷಣೆ ಮಾಡಿದ್ದಾರೆ.

ಗುರುವಾರ ಗೋತಬಯ ರಾಜಪಕ್ಸೆ ಅವರು ನಿವಾಸದ ಎದುರು ನೂರಾರು ಮಂದಿ ಪ್ರತಿಭಟನೆ ನಡೆಸಿ, ನಿವಾಸವನ್ನು ಗೇಟ್ ಮುರಿದು ಒಳಗೆ ನುಗ್ಗಲು ಯತ್ನಿಸಿದರು.

ಲಂಕಾ ಅಧ್ಯಕ್ಷ, ಅಧಿಕಾರವನ್ನು ರಕ್ಷಣಾ ಪಡೆಗಳಿಗೆ ನೀಡಿದ್ದಾರೆ.

ಅಧ್ಯಕ್ಷ ಗೊತಬಯ ರಾಜಪಕ್ಸೆ ವಿರುದ್ಧ ತೀವ್ರ ಆಕ್ರೋಶಗಳು ವ್ಯಕ್ತವಾಗುತ್ತಿದ್ದು ಅವರ ಪದಚ್ಯುತಿಗೆ ಸಾಕಷ್ಟು ಒತ್ತಾಯಗಳು ಕೇಳಿಬರುತ್ತಿವೆ. ಜನರು ದಂಗೆ ಎದ್ದಿರುವುದರಿಂದ ಹೆದರಿರುವ ಅಧ್ಯಕ್ಷರು ಯಾವುದೇ ವಿಚಾರಣೆಯಿಲ್ಲದೆ ದೀರ್ಘಾವಧಿಯವರೆಗೆ ಶಂಕಿತರನ್ನು ಬಂಧಿಸಲು ಮಿಲಿಟರಿಗೆ ಅವಕಾಶ ನೀಡುವ ಮೂಲಕ ಕಠಿಣ ಕಾನೂನುಗಳನ್ನು ಜಾರಿಗೆ ತಂದಿದ್ದಾರೆ.

Leave A Reply