ಬ್ರಹ್ಮಾವರ : ಒಂಟಿ ಮಹಿಳೆಯಿದ್ದ ಮನೆಯಲ್ಲಿ ದರೋಡೆ| ಒಂದೇ ದಿನದಲ್ಲಿ ಆರೋಪಿಯನ್ನು ಪತ್ತೆ ಹಚ್ಚಿದ ಪೊಲೀಸರು!
ಬ್ರಹ್ಮಾವರ: ಮನೆಯಲ್ಲಿದ್ದ ಒಂಟಿ ಮಹಿಳೆ ಮನೆಗೆ ನುಗ್ಗಿ ಹಾಡುಹಗಲೇ ಚಿನ್ನಾಭರಣ ಕಳವು ಮಾಡಿದ ಆರೋಪಿಯನ್ನು 24 ಗಂಟೆಯೊಳಗೆ ಬ್ರಹ್ಮಾವರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಂಗಳೂರು ಯಶವಂತಪುರ ಮೋಹನ್ ಕುಮಾರ್ ನಗರ ನಿವಾಸಿ ಸುರೇಶ್ ಯಾನೆ ಸೂರ್ಯ (31) ಬಂಧಿತ ಆರೋಪಿ. ಈತ ಮೂಲತಃ ಬ್ರಹ್ಮಾವರ ತಾಲೂಕಿನ ಪೆಜಮಂಗೂರು ಗ್ರಾಮದ ಪ್ರಗತಿ ನಗರ ನಿವಾಸಿ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ. ಬ್ರಹ್ಮಾವರ ಚೇರ್ಕಾಡಿ ಗ್ರಾಮದ ಕನ್ನಾರು ಎಂಬಲ್ಲಿ ವಾಸು ಪೂಜಾರಿ ಎಂಬವರ ಹೆಂಡತಿ …