ಮಲೈಕಾ ಅರೋರಾಗೆ ಅಪಘಾತ; ಆಸ್ಪತ್ರೆ ದಾಖಲು

ನಟಿ ಮಲೈಕಾ ಅರೋರಾ ಅವರು ಹಲವು ವರ್ಷಗಳಿಂದ ಬಾಲಿವುಡ್​ನಲ್ಲಿ ಗುರುತಿಸಿಕೊಂಡಿದ್ದಾರೆ. ಈಗಲೂ ಅವರಿಗೆ ಸಖತ್​ ಡಿಮ್ಯಾಂಡ್​ ಇದೆ. ಫಿಟ್ನೆಸ್​ ಬಗ್ಗೆ ಮಲೈಕಾ ಅರೋರಾ ಹೆಚ್ಚು ಕಾಳಜಿ ವಹಿಸುತ್ತಾರೆ. ಹದಿಹರೆಯದ ಹುಡುಗಿಯರೂ ನಾಚುವಂತೆ ಮಲೈಕಾ ಅರೋರಾ ಫಿಟ್ನೆಸ್​ ಕಾಪಾಡಿಕೊಂಡಿದ್ದಾರೆ. ಆದರೆ ದುರ್ವಿದಿ ಯುಗಾದಿ ಹಬ್ಬದಂದು ನಟಿ, ರೂಪದರ್ಶಿ ಮಲೈಕಾ ಅರೋರಾ ಶನಿವಾರ ಕಾರು ಅಪಘಾತದಲ್ಲಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇನ ಖೋಪೋಲಿ ಬಳಿ ಬಾಲಿವುಡ್ ನಟಿ ಮಲೈಕಾ ಅರೋರಾ ಅವರ ಎಸ್‌ಯುವಿ ಕಾರು ಅಪಘಾತಕ್ಕೀಡಾಗಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.


Ad Widget

Ad Widget

Ad Widget

ಅರೋರಾ ಪುಣೆಯಿಂದ ಮುಂಬೈಗೆ ಹಿಂದಿರುಗುತ್ತಿದ್ದಾಗ ಫುಡ್-ಮಾಲ್ ಬಳಿ  ಈ ಅಪಘಾತ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಶನಿವಾರ ಮಧ್ಯಾಹ್ನ ಪುಣೆಯಲ್ಲಿ ನಡೆದ ಫ್ಯಾಶನ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದಾಗ ಕಾರು ಅಪಘಾತವಾಗಿದೆ. ಅಪಘಾತದಲ್ಲಿ ಮಲೈಕಾ ಕಣ್ಣಿಗೆ ಗಾಯಗಳಾಗಿವೆ ಎಂದು ವರದಿಗಳು ತಿಳಿಸಿವೆ.

ಕಾರು ಚಲಿಸುತ್ತಿದ್ದಾಗ ಎರಡು ಕಾರುಗಳ ನಡುವೆ ಸಿಲುಕಿ ಅಪಘಾತ ಸಂಭವಿಸಿದೆ. ಸದ್ಯ ಮಲೈಕಾ ಅರೋರಾರನ್ನು ನಿಗಾದಲ್ಲಿ ಇರಿಸಲಾಗಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Leave a Reply

error: Content is protected !!
Scroll to Top
%d bloggers like this: