ಹೊಸ ವರ್ಷದ ಬೈಕ್ ರಾಲಿ ವೇಳೆ ಹಿಂದೂ ಕಾರ್ಯಕರ್ತರ ಮೇಲೆ ಕಲ್ಲುತೂರಾಟ !!| ದುಷ್ಕರ್ಮಿಗಳಿಂದ ಅಂಗಡಿಗಳಿಗೆ ಬೆಂಕಿ, ಉದ್ವಿಗ್ನಗೊಂಡ ರಾಜಸ್ಥಾನದಲ್ಲಿ ಕರ್ಫ್ಯೂ ಜಾರಿ
ನಿನ್ನೆ ಯುಗಾದಿ. ಹಿಂದೂಗಳಿಗೆ ಬಹು ವಿಶೇಷ ದಿನ. ಆದರೆ ಹಬ್ಬದ ಸಂಭ್ರಮದಲ್ಲಿದ್ದ ಹಿಂದುಗಳ ಮೇಲೆ ಕಲ್ಲು ತೂರಾಟ ನಡೆದ ಘಟನೆಯೊಂದು ಬೆಳಕಿಗೆ ಬಂದಿದೆ. ಹಿಂದೂ ಹೊಸ ವರ್ಷದಂದು ರಾಜಸ್ಥಾನದ ಕರೌಲಿಯಲ್ಲಿ ನಡೆದ ಬೈಕ್ ರಾಲಿ ಮೇಲೆ ಕಲ್ಲು ತೂರಾಟ ನಡೆದಿದ್ದು, ಇದರಿಂದ ಹತ್ವಾರ ಮಾರುಕಟ್ಟೆಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿ ನಗರದಲ್ಲಿ ಕರ್ಫ್ಯೂ ಹೇರಲಾಗಿದೆ.
ಮಾಹಿತಿ ಪ್ರಕಾರ, ಹತ್ತಕ್ಕೂ ಹೆಚ್ಚು ಅಂಗಡಿಗಳು ಮತ್ತು ಮೂರು ಬೈಕ್ಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಪರಿಸ್ಥಿತಿ ಹದಗೆಟ್ಟಿರುವ ಹಿನ್ನೆಲೆಯಲ್ಲಿ ನಗರದಲ್ಲಿ ಕರ್ಫ್ಯೂ ಹೇರಲಾಗಿದೆ. ಹದಗೆಡುತ್ತಿರುವ ಪರಿಸ್ಥಿತಿಯನ್ನು ನಿಯಂತ್ರಿಸಲು ಪ್ರಯತ್ನಿಸಲಾಗುತ್ತಿದೆ. ಘಟನಾ ಸ್ಥಳದ ಜೊತೆಗೆ ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕರೌಲಿಯಲ್ಲಿ ಪರಿಸ್ಥಿತಿ ಹದಗೆಟ್ಟ ತಕ್ಷಣ ಹೊಸ ವರ್ಷದಂದು ನಡೆಸಲಾಗುತ್ತಿದ್ದ ಬೈಕ್ ರಾಲಿಯನ್ನು ರದ್ದುಗೊಳಿಸಲಾಗಿದೆ. ಈವರೆಗೆ ಬೆಂಕಿ ಹಚ್ಚಿದ್ದರಿಂದ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಪೊಲೀಸ್ ಡಿಜಿಯೊಂದಿಗೆ ಮಾತನಾಡಿ ಘಟನೆಯ ಬಗ್ಗೆ ವಿಚಾರಿಸಿದ್ದಾರೆ. ಪ್ರತಿಯೊಬ್ಬ ಕಿಡಿಗೇಡಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದು, ಶಾಂತಿ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವಂತೆ ಗೆಹ್ಲೋಟ್ ಜನರಿಗೆ ಮನವಿ ಮಾಡಿದ್ದಾರೆ.