ಪಾಕಿಸ್ತಾನ ಸಂಸತ್ ವಿಸರ್ಜನೆ! ಚುನಾವಣೆಗೆ ಕರೆ ಕೊಟ್ಟ ಇಮ್ರಾನ್ ಖಾನ್

ಪಾಕಿಸ್ತಾನ ಅಧ್ಯಕ್ಷರು ಅಸೆಂಬ್ಲಿ ವಿಸರ್ಜಿಸಿದ್ದಾರೆ. ಪಾಕಿಸ್ತಾನ ಸಂಸತ್ ವಿಸರ್ಜನೆ ಮಾಡಲಾಗಿದೆ. ಮೂರು ತಿಂಗಳಲ್ಲಿ ಚುನಾವಣೆ ನಡೆಸಲು ಸೂಚನೆ ನೀಡಿದ್ದಾರೆ.

ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ವಿರುದ್ಧ ರಾಷ್ಟ್ರದ ಸಂಸತ್ತಿನಲ್ಲಿ ಇಂದು ನಡೆಯಬೇಕಿದ್ದ ಅವಿಶ್ವಾಸ ನಿರ್ಣಯ ಮಂಡನೆ ಸ್ಥಗಿತಗೊಂಡಿದೆ. ಅವಿಶ್ವಾಸ ಮತವು ವಿದೇಶಿ ಪಿತೂರಿಯ ಭಾಗವಾಗಿದೆ ಎಂದು ಸ್ಪೀಕರ್ ತೀರ್ಪು ನೀಡಿದ ನಂತರ ರಾಷ್ಟ್ರೀಯ ಅಸೆಂಬ್ಲಿ ಅಧಿವೇಶನವನ್ನು ಅಮಾನತುಗೊಳಿಸಲಾಗಿದೆ. 

ಪಾಕಿಸ್ತಾನ್ ಪೀಪಲ್ಸ್ ಪಾರ್ಟಿಯ ಹಾಲಿ ಅಧ್ಯಕ್ಷ ಬಿಲಾವಲ್ ಭುಟ್ಟೋ ಜರ್ದಾರಿ, ಸರ್ಕಾರವು ಸಂವಿಧಾನವನ್ನು ಉಲ್ಲಂಘಿಸಿದೆ. ಅವಿಶ್ವಾಸ ನಿರ್ಣಯದ ಮೇಲೆ ಮತದಾನಕ್ಕೆ ಅವಕಾಶ ನೀಡಲಿಲ್ಲ. ಪಾಕಿಸ್ತಾನದ ಸಂವಿಧಾನವನ್ನು ರಕ್ಷಿಸಲು ಎಲ್ಲಾ ಪ್ರಯತ್ನ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಪ್ರಧಾನಿ ಇಮ್ರಾನ್ ಖಾನ್ ಇಂದು ಅಧ್ಯಕ್ಷ ಆರಿಫ್ ಅಲ್ವಿ ಅವರನ್ನು ಭೇಟಿ ಮಾಡಿ ರಾಜಕೀಯ ಪರಿಸ್ಥಿತಿ ಕುರಿತು ಚರ್ಚಿಸಿದ್ದು, ಪ್ರಧಾನಿ ಸಲಹೆಯ ಮೇರೆಗೆ ಪಾಕಿಸ್ತಾನದ ಅಧ್ಯಕ್ಷರು ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದ್ದಾರೆ.

Leave A Reply

Your email address will not be published.