ಪರೀಕ್ಷೆ ಬರೆಯಲು ಗೆಳೆಯರೊಂದಿಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಅಪಘಾತ!! ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು-ಇಬ್ಬರು ಗಂಭೀರ!!

ತುಮಕೂರು:ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲೆಂದು ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಬೈಕ್ ಅಪಘಾತಕ್ಕೀಡಾಗಿ ವಿದ್ಯಾರ್ಥಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದಲ್ಲಿ ನಡೆದಿದೆ.ಮೃತ ಬಾಲಕನನ್ನು ನವೀನ್(16) ಎಂದು ಗುರುತಿಸಲಾಗಿದೆ.

ಇಂದು ನಡೆಯುವ ಗಣಿತ ಪರೀಕ್ಷೆಗೆ ತನ್ನ ಇನ್ನಿಬ್ಬರು ಗೆಳೆಯರೊಂದಿಗೆ ಸೇರಿಕೊಂಡು ಬೈಕ್ ಏರಿ ಹೊರಟಿದ್ದ ನವೀನ್, ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ ಗೆ ಡಿಕ್ಕಿಯಾಗಿದೆ.ಅಪಘಾತದಿಂದ ಗಂಭೀರ ಗಾಯಗೊಂಡ ನವೀನ್ ಸ್ಥಳದಲ್ಲೇ ಮೃತಪಟ್ಟರೆ, ಉಳಿದಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.

ಅತಿವೇಗವವೇ ಘಟನೆಗೆ ಕಾರಣ ಎನ್ನಲಾಗಿದ್ದು,ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಹದಿಹರೆಯದ ಬಾಲಕರಲ್ಲಿ ವಾಹನ ಕೊಟ್ಟರೆ ಇಂತಹ ಅನಾಹುತಗಳು ಸಂಭವಿಸುತ್ತದೆ ಎಂದು ಸರ್ಕಾರ, ಪೊಲೀಸ್ ಇಲಾಖೆ ಎಷ್ಟೇ ಕಠಿಣ ಕ್ರಮ ಕೈಗೊಂಡರು ಪೋಷಕರಿಗಿನ್ನೂ ಅರ್ಥವಾಗುತ್ತಿಲ್ಲ ಎನ್ನುವುದು ವಿಪರ್ಯಾಸವೇ ಸರಿ.

Leave A Reply