ಉಡುಪಿ ಕೋರ್ಟ್ ನಲ್ಲಿ ಉದ್ಯೋಗವಕಾಶ : ಎಸ್ ಎಸ್ ಎಲ್ ಸಿ ಪಾಸಾದವರು ಅರ್ಜಿ ಸಲ್ಲಿಸಿ| ಮಾಸಿಕ 17,000/- ರಿಂದ 29,000 ರೂ.ವರೆಗೆ ವೇತನ!

ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ 17 ಜವಾನ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅಭ್ಯರ್ಥಿಗಳು ಹುದ್ದೆಗಳ ಬಗೆಗೆ ಇನ್ನಷ್ಟು ಮಾಹಿತಿಯನ್ನು ತಿಳಿಯಲು ಮುಂದೆ ಓದಿ.

ಪ್ರಮುಖ‌ ದಿನಾಂಕ : ಆನ್‌ಲೈನ್ ಮೂಲಕ ಮಾರ್ಚ್ 29, 2022 ರಿಂದ ಮೇ 5, 2022ರೊಳಗೆ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.

ವಿದ್ಯಾರ್ಹತೆ : ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು
ಎಸ್ ಎಸ್ ಎಲ್ ಸಿ ಅಥವಾ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು.

ವೇತನ : ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೇಮಕಾತಿಯ ಜವಾನ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 17,000/ ರಿಂದ 28,950/-ರೂ.ಗಳ ವರೆಗೆ ವೇತನವನ್ನು ನೀಡಲಾಗುವುದು.

ವಯೋಮಿತಿ : ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಟ 35 ವರ್ಷ, ಪ್ರವರ್ಗ-2A, ಪ್ರವರ್ಗ-2B, ಪ್ರವರ್ಗ-3A ಮತ್ತು ಪ್ರವರ್ಗ 3B ಯ ಗರಿಷ್ಠ 38 ವರ್ಷ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಗರಿಷ್ಠ 40 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

ಆಯ್ಕೆ ವಿಧಾನ : ಜವಾನ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯುವ ಸಾಮರ್ಥ್ಯ ಮತ್ತು ಸಾಮಾನ್ಯ ಜ್ಞಾನದ ಬಗ್ಗೆ ಸಂದರ್ಶನ ಮಾಡಲಾಗುವುದು. ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ ಒಂದು ಹುದ್ದೆಗೆ 10 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ತದನಂತರ ಸಂದರ್ಶನದಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

ಅರ್ಜಿ ಶುಲ್ಕ : ಈ ಹುದ್ದೆಗಳಿಗೆ ಸಾಮಾನ್ಯ ವರ್ಗ, ಪ್ರವರ್ಗ-1, ಪ್ರವರ್ಗ 2A,2B,3A,3Bಗೆ ಸೇರಿದ ಅಭ್ಯರ್ಥಿಗಳು 200/-ರೂ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು. ಅಂಗವಿಕಲ ಅಭ್ಯರ್ಥಿಗಳು 100/-ರೂ ಅರ್ಜಿ ಶುಲ್ಕವನ್ನು ಪಾವತಿಸಬೇಕು.

ನಿಗದಿತ ಶುಲ್ಕವನ್ನು ಅಭ್ಯರ್ಥಿಗಳು ನ್ಯಾಯಾಲಯದ ವೆಬ್ ಸೈಟ್ ನಲ್ಲಿ ನೀಡಲಾದ ಲಿಂಕ್ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ ಆನ್ಲೈನ್ ಪೇಮೆಂಟ್ ನೆಟ್ ಬ್ಯಾಂಕಿಂಗ್/ಕ್ರೆಡಿಟ್ ಕಾರ್ಡ್/ಚಲನ್ ಡೌನ್‌ಲೋಡ್/ ಡೆಬಿಟ್ ಕಾರ್ಡ್ ಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ.

ಅಥವಾ ಅಭ್ಯರ್ಥಿಗಳು ಚಲನ್ ಪ್ರತಿಯನ್ನು ಅಧಿಕೃತ ವೆಬ್ ಸೈಟ್ ನಿಂದ ಡೌನ್ ಲೋಡ್ ಮಾಡಿಕೊಂಡು ಅದರ ಪ್ರಿಂಟೌಟ್ ಅನ್ನು ಪಡೆದುಕೊಂಡು ಎಸ್.ಬಿ.ಐ ನ ಯಾವುದೇ ಶಾಖೆಗೆ ಮೇ 7, 2022ರೊಳಗೆ ಹಾಜರುಪಡಿಸಿ ಶುಲ್ಕವನ್ನು ಪಾವತಿಸತಕ್ಕದ್ದು.

ಈ ಮೇಲಿನ ವಿಧಾನಗಳನ್ನು ಹೊರತು ಪಡಿಸಿ ಯಾವುದೇ ಡಿಮಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ನಗದು, ಮನಿ ಆರ್ಡರ್ ಇವುಗಳ ರೂಪದಲ್ಲಿ ಶುಲ್ಕವನ್ನು ಸ್ವೀಕರಿಸಲಾಗುವುದಿಲ್ಲ.

ಆನ್‌ಲೈನ್ ಹೊರತುಪಡಿಸಿ ಇತರೆ ಯಾವುದೇ ವಿಧಾನದಲ್ಲಿ
ಕಳುಹಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave A Reply