ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಮರ ,ಮಹಿಳೆ ಸಾವು,ಚಾಲಕ ಗಂಭೀರ,ಐವರಿಗೆ ಗಾಯ

ಚಲಿಸುತ್ತಿದ್ದ ಆಟೋ ಮೇಲೆ ಮರ ಉರುಳಿಬಿದ್ದು, ಓರ್ವ ಮಹಿಳೆ ಮೃತಪಟ್ಟಿದ್ದು, ಐವರು ಗಾಯಗೊಂಡಿದ್ದು, ಚಾಲಕನ ಸ್ಥಿತಿ ಗಂಭೀರ ಗಾಯಗೊಂಡಿರುವ ಘಟನೆ ವಿಜಯಪುರ ನಗರದ ಪೊಲೀಸ್ ತರಬೇತಿ ಕೇಂದ್ರದ ಆವರಣದಲ್ಲಿ ನಡೆದಿದೆ.

ಬೇರು ದುರ್ಬಲಗೊಂಡ ಮರ ರಸ್ತೆಗೆ ಉರುಳಿ ಬಿದ್ದ ಪರಿಣಾಮ ವಿಜಯಪುರ ‌ನಗರದ ಸಿದ್ದಾರೂಢ ಕಾಲೋನಿಯ ನಿವಾಸಿ ಯಲ್ಲಮ್ಮಾ ಕೊಂಡಗೂಳಿ (45) ಮೃತಪಟ್ಟಿದ್ದು, ಇಂದು ತಾಯಿ ಕುಲಕರ್ಣಿ, ಚಂದ್ರಕಲಾ ವಾಲೀಕಾರ, ಮಂದಾಕಿನಿ ಬಡಿಗೇರ, ಸುವರ್ಣಾ ಮಜ್ಜಿಗಿ, ಅಟೋ ಚಾಲಕ ಸಚಿನ ರಾಠೋಡ ಎಂಬವರಿಗೆ ಗಾಯಗಳಾಗಿವೆ. ಆಟೋ ಚಾಲಕ ಸಚಿನ್ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.


Ad Widget

Ad Widget

Ad Widget

ವಿಜಯಪುರ ತಾಲೂಕಿನ ಮದಬಾವಿ ತಾಂಡಾದ ಅಟೋ‌ ಚಾಲಕ ಸಚಿನ ಸಂಬಂಧಿಕರ ಮನೆಯಲ್ಲಿನ ನಾಮಕರಣ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮರಳಿ ಬರುವಾಗ ಈ ಅವಘಡ ಸಂಭವಿಸಿದೆ.

Leave a Reply

error: Content is protected !!
Scroll to Top
%d bloggers like this: