ಬಸ್ ನ್ನು ಹಿಂದಿಕ್ಕುವ ಭರದಲ್ಲಿ ಕೆಟ್ಟು ನಿಂತಿದ್ದ ಈಚರ್ ಲಾರಿಗೆ ಡಿಕ್ಕಿ ಹೊಡೆದ ಬೈಕ್ ಸವಾರರು|ಭೀಕರ ಅಪಘಾತದಲ್ಲಿ ಪಾದಚಾರಿ ಸಾವು-ಸವಾರರಿಬ್ಬರಿಗೆ ಗಂಭೀರ ಗಾಯ

ಬ್ರಹ್ಮಾವರ: ಈಚರ್ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ತಾಲೂಕಿನ ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಓರ್ವ ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಕೋಟ ಮಣೂರು ಬೊಬ್ಬರ್ಯ ಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಲಾರಿಯೊಂದು ಕೆಟ್ಟು ನಿಂತಿತ್ತು. ಅದೇ ದಾರಿಯಾಗಿ ಕೋಟದಿಂದ ಕುಂಬಾಸಿ ಕಡೆಗೆ ಹೋಗುತ್ತಿದ್ದ ಬೈಕ್ ಸವಾರರು ಬಸ್ಸನ್ನು ಹಿಂದಿಕ್ಕುವ ಭರದಲ್ಲಿ ಕೆಟ್ಟು ನಿಂತ ಲಾರಿಯ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾರೆ.

ಡಿಕ್ಕಿಯ ರಭಸಕ್ಕೆ ಬೈಕ್ ಪಾದಚಾರಿ ಓರ್ವನಿಗೆ ಡಿಕ್ಕಿ ಹೊಡೆದಿದ್ದು,ಅವರು ಗಂಭೀರ ಗಾಯಗೊಂಡಿದ್ದಾರೆ.ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಮೃತ ಪಾದಚಾರಿಯನ್ನು ಪ್ರಸನ್ನ ದೇವಾಡಿಗ ಎಂದು ಗುರುತಿಸಲಾಗಿದೆ. ಬೈಕ್ ಸವಾರರಿಬ್ಬರು ಗಂಭೀರ ಗಾಯಗೊಂಡಿದ್ದು ಅವರನ್ನು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave A Reply