ವಿದ್ಯಾರ್ಥಿಗಳೇ ಗಮನಿಸಿ: 13 ಭಾಷೆಗಳಲ್ಲಿ ಸಿಯುಇಟಿ- ಕೇಂದ್ರೀಯ ವಿವಿಗಳ ಪ್ರವೇಶಕ್ಕೆ ಒಂದೇ ಅರ್ಜಿ!

0 10

ವಿದ್ಯಾರ್ಥಿಗಳು, ವಿಶ್ವವಿದ್ಯಾನಿಲಯಗಳು ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ಹೊರೆಯನ್ನು ಕಡಿಮೆ ಮಾಡಲು 2022-23 ಶೈಕ್ಷಣಿಕ ವರ್ಷಕ್ಕೆ ಹೊಸ ಶಿಕ್ಷಣ ನೀತಿಯನ್ನು ಪರಿಚಯಿಸಲು ಸರ್ಕಾರ ಮುಂದಾಗಿದೆ.

ಹೊಸ ಶಿಕ್ಷಣ ನೀತಿ-2020 ರ ಅನ್ವಯ ವಿದ್ಯಾರ್ಥಿಗಳು, ವಿಶ್ವವಿದ್ಯಾನಿಲಯಗಳು ಮತ್ತು ಇಡೀ ಶಿಕ್ಷಣ ವ್ಯವಸ್ಥೆಯ ಮೇಲಿನ ಹೊರೆಯನ್ನು ಕಡಿಮೆ ಮಾಡಲು 2022-23ರ ಶೈಕ್ಷಣಿಕ ವರ್ಷದಿಂದ ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ನಡೆಸಲು ನಿರ್ಧರಿಸಲಾಗಿದೆ.

ಈ‌ ಬಗ್ಗೆ ಲೋಕಸಭೆಯಲ್ಲಿ ಲಿಖಿತ ಉತ್ತರ ನೀಡಿದ ಶಿಕ್ಷಣ ಖಾತೆ ರಾಜ್ಯ ಸಚಿವ ಡಾ.ಸುಭಾಸ್ ಸರ್ಕಾರ್ ಮಾಹಿತಿ ನೀಡಿದ್ದಾರೆ.

ಪದವಿಪೂರ್ವ ಕಾರ್ಯಕ್ರಮಕ್ಕಾಗಿ ಸಾಮಾನ್ಯ ವಿಶ್ವವಿದ್ಯಾನಿಲಯ ಪ್ರವೇಶ ಪರೀಕ್ಷೆ(ಸಿಯುಇಟಿ) ವಿವಿಧ ಬೋರ್ಡ್‌ಗಳ ವಿದ್ಯಾರ್ಥಿಗಳನ್ನು ಒಂದೇ ಮಟ್ಟದಲ್ಲಿ ಮೌಲ್ಯಮಾಪನ ಮಾಡುವುದು, ಅವರಿಗೆ ಸಮಾನ ಅವಕಾಶವನ್ನು ನೀಡುತ್ತದೆ ಎಂದು ಸಚಿವರು ಹೇಳಿದ್ದಾರೆ.

ವಿದ್ಯಾರ್ಥಿಗಳು ತಮ್ಮ ಆಯ್ಕೆಯ ಪ್ರಕಾರ ಒಂದಕ್ಕಿಂತ ಹೆಚ್ಚು ವಿಶ್ವವಿದ್ಯಾನಿಲಯಗಳಿಗೆ ಒಂದೇ ಅರ್ಜಿ ಸಲ್ಲಿಸಬಹುದು. ಇದರಿಂದ ಆರ್ಥಿಕ ಹೊರೆ ಕಡಿಮೆಯಾಗುತ್ತದೆ. ವಿದ್ಯಾರ್ಥಿಗಳು ವಿವಿಯಲ್ಲಿ ಪ್ರವೇಶಕ್ಕಾಗಿ ನೂರಾರು ಪರೀಕ್ಷಾ ಕೇಂದ್ರಗಳಲ್ಲಿ 13 ಭಾಷೆಗಳಲ್ಲಿ ಪರೀಕ್ಷೆಯ ಬರೆಯಬಹುದಾಗಿದೆ ಎಂದರು.

Leave A Reply