ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ !! | ಯೆಲ್ಲೋ ಅಲರ್ಟ್ ಘೋಷಣೆ

0 11

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ದಿನಗಳಿಂದ ಬಿಸಿಲು ಮಳೆಯ ಆಟ ನಡೆಯುತ್ತಿದೆ. ಹಗಲಿಡೀ ಸುಡುವ ಬಿಸಿಲು, ಸಂಜೆ/ ರಾತ್ರಿ ವೇಳೆ ಮಳೆಯಾಗುತ್ತಿದೆ. ಇನ್ನು ಕೆಲ ದಿನಗಳ ಕಾಲ ಕರ್ನಾಟಕದ ಕರಾವಳಿ ಪ್ರದೇಶದಾದ್ಯಂತ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕ ಮತ್ತು ಮಲೆನಾಡು ಭಾಗದ ಎಲ್ಲಾ ಜಿಲ್ಲೆಗಳಲ್ಲಿ ಭಾರೀ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹಾಗಾಗಿ ಕರಾವಳಿ ಪ್ರದೇಶದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಇನ್ನೂ ಒಂದು ವಾರ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಿಸಿಲಿನ ಪ್ರಖರತೆಯಿಂದಾಗಿ ವಾತಾವರಣದಲ್ಲಿ ಕೆಲವೆಡೆ ಒತ್ತಡ ಸೃಷ್ಟಿಯಾಗಿ ಆ ಪ್ರದೇಶಕ್ಕೆ ವಿವಿಧ ಭಾಗಗಳಿಂದ ಗಾಳಿ ಬೀಸಿದಾಗ ಅಲ್ಲಿ ಮಳೆಯಾಗುತ್ತಿದೆ. ಕಳೆದ ಒಂದು ವಾರದಿಂದ ಇದೇ ರೀತಿಯ ವಿಚಿತ್ರ ಹವಾಮಾನ ಪರಿಸ್ಥಿತಿ ಕರಾವಳಿಗರನ್ನು ಕಾಡುತ್ತಿದೆ.

Leave A Reply