ನಿರುದ್ಯೋಗಿ ಯುವಕ-ಯುವತಿಯರಿಗೆ ಇಲ್ಲಿದೆ ಸುವರ್ಣಾವಕಾಶ !! | ಮೂರು ತಿಂಗಳ ಉಚಿತ ಕಂಪ್ಯೂಟರ್ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯ ವತಿಯಿಂದ ನಿರುದ್ಯೋಗಿ ಯುವಕ ಯುವತಿಯರಿಗಾಗಿ ಕಂಪ್ಯೂಟರ್ ಹಾಗೂ ಹಾರ್ಡ್‌ವೇರ್ ಮತ್ತು ನೆಟ್‌ವರ್ಕ್ ಅಡ್ಮಿನಿಸ್ಟ್ರೇಷನ್‌ನಲ್ಲಿ 3 ತಿಂಗಳ ಉಚಿತ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾಗಿರಬೇಕು. ಪಿಯುಸಿ, ಪದವಿ, ಡಿಪ್ಲೊಮಾ ಪದವಿ ಹೊಂದಿದವರಿಗೆ ಆದ್ಯತೆ ಇರುತ್ತದೆ. 18ರಿಂದ 27 ವರ್ಷದೊಳಗಿನವರು ಹಾಗೂ ಪರಿಶಿಷ್ಟ ಜಾತಿ/ ವರ್ಗದಲ್ಲಿ 30 ವರ್ಷದವರೆಗಿನ ವಯಸ್ಸಿನವರು ಈ ತರಬೇತಿ ಪಡೆಯಲು ಅರ್ಹರು. ಬೆಂಗಳೂರಿನ ಮಲ್ಲೆಶ್ವರದಲ್ಲಿರುವ ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆಯಲ್ಲಿ ನೇರ ಸಂದರ್ಶನ ಹಾಜರಾಗಬೇಕು.

ಪ್ರತಿದಿನ ಬೆಳಗ್ಗೆ 11 ಗಂಟೆಗೆ ಅರ್ಹತಾ ಪರೀಕ್ಷೆ ಮತ್ತು ಸಂದರ್ಶನಗಳು ನಡೆಯಲಿವೆ. ವಿಳಾಸ: ಕೆನರಾ ಬ್ಯಾಂಕ್ ಮಾಹಿತಿ ತಂತ್ರಜ್ಞಾನ ತರಬೇತಿ ಸಂಸ್ಥೆ, ಚಿತ್ರಾಪುರ ಭವನ, ಮಲ್ಲೇಶ್ವರ, ಬೆಂಗಳೂರು. ದೂ: 2344 0036, 2346 3580, 94485 38107.

Leave A Reply

Your email address will not be published.