ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಚೇತರಿಕೆ! ಇಂದು ಡಿಸ್ಚಾರ್ಜ್ ಸಾಧ್ಯತೆ

Share the Article

ಮಂಗಳೂರು: ನಿನ್ನೆ ಆರೋಗ್ಯದಲ್ಲಿ ಏರುಪೇರು ಉಂಟಾಗಿ ನಿನ್ನೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಎಸ್ ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಚೇತರಿಸಿಕೊಂಡಿದ್ದಾಗಿ ವರದಿಯಾಗಿದೆ. ಅವರು ಇದೀಗ ನಾನು ಚೇತರಿಸಿಕೊಂಡಿದ್ದೇನೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ನಾನು ಆರೋಗ್ಯವಾಗಿದ್ದೇನೆ. ಯಾರೂ ಭಯಪಡುವ ಅವಶ್ಯಕತೆ ಇಲ್ಲ. ನನ್ನ ಆರೋಗ್ಯ ವಿಚಾರಿಸಿದ ಎಲ್ಲರಿಗೂ ಧನ್ಯವಾದಗಳು ಎಂದು ಅವರು ತಿಳಿಸಿದ್ದಾರೆ. ಬಿಪಿ ಸಮಸ್ಯೆಯಾಗಿ ನಿನ್ನೆ ಅವರನ್ನು ಮಂಗಳೂರಿನ ಎಜೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ ಅವರನ್ನು ಆಸ್ಪತ್ರೆಯಿಂದ ಡಿಸ್ಟಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Leave A Reply