ಪರಿಶಿಷ್ಟ ಜಾತಿ/ಪಂಗಡದ ಬಡವರಿಗೆ ರಾಜ್ಯ ಸರಕಾರದಿಂದ ಜೋಡಿ ಸಿಹಿ ಸುದ್ದಿ |ಭೂ ಒಡೆತನ ಯೋಜನೆ, ಸಹಾಯಧನ, ವಸತಿ ಸಬ್ಸಿಡಿ ಹೆಚ್ಚಳ!!!

ಪರಿಶಿಷ್ಟ ಜಾತಿ/ಪಂಗಡದ ಬಡವರಿಗೆ ರಾಜ್ಯ ಸರ್ಕಾರ ಜೋಡಿ ಸಿಹಿಸುದ್ದಿಯೊಂದನ್ನು ಪ್ರಕಟಿಸಿದೆ. ಈ ಸಮುದಾಯದ ಬಡವರು ಭೂ ಒಡೆಯರಾಗುವ ಅವಕಾಶ ಕಲ್ಪಿಸುವ ಉದ್ದೇಶದಿಂದ ಭೂ ಒಡೆತನ ಯೋಜನೆಯಡಿ ನೀಡುತ್ತಿರುವ ಸಹಾಯಧನ ಮೊತ್ತವನ್ನು 15 ರಿಂದ 20 ಲಕ್ಷ ರೂ.ಗೆ ಹೆಚ್ಚಿಸುವ ಹಾಗೂ ಎಸ್‌ಸಿ/ಎಸ್‌ಟಿ ಸಮುದಾಯದವರಿಗೆ ಮನೆ ನಿರ್ವಣಕ್ಕಾಗಿ ನೀಡುವ ಸಬ್ಸಿಡಿ ಮೊತ್ತವನ್ನು 1.75 ರೂ.ಗಳಿಂದ 2 ಲಕ್ಷ ರೂ.ಗಳಿಗೆ ಹೆಚ್ಚಿಸಲು ನಿರ್ಧರಿಸಿರುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದರು.


Ad Widget

Ad Widget

Ad Widget

Ad Widget
Ad Widget

Ad Widget

ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಿದ್ದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್‌ರಾಂ ಅವರ 115ನೇ ಜಯಂತಿ, ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಈ ಮಾತನ್ನು ಹೇಳಿದರು.


Ad Widget

ಎಸ್‌ಸಿ, ಎಸ್‌ಟಿ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ವಿಶೇಷ ತರಬೇತಿ ನೀಡುವ ಯೋಜನೆಯನ್ನು ಈ ವರ್ಷ ಪ್ರಾರಂಭಿಸಲಾಗುವುದು. ಹಾಗೆನೇ ‘ಮುಖ್ಯಮಂತ್ರಿ ಮಾರ್ಗದರ್ಶಿನಿ’ ವೇದಿಕೆ ಮೂಲಕ 8 ರಿಂದ 12ನೇ ತರಗತಿ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿಗೆ ಕಾರ್ಯಕ್ರಮ ರೂಪಿಸಲಾಗುವುದು ಎಂದರು. ಅಲ್ಲದೆ, ಈ ಸಮುದಾಯಗಳಿಗೆ ನವೋದ್ಯಮದಲ್ಲಿ ತೊಡಗಿಕೊಳ್ಳಲು ಉತ್ತೇಜನ ನೀಡುವುದಕ್ಕಾಗಿ 50 ಲಕ್ಷ ರೂ. ಸಹಾಯಧನ ನೀಡುವ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಿಸಲಾಗಿದೆ ಎಂದು ಹೇಳಿದರು.

error: Content is protected !!
Scroll to Top
%d bloggers like this: