ರಾಜ್ಯದ ಶಾಲಾ ಮಕ್ಕಳೇ ನಿಮಗೊಂದು ಸಿಹಿಯಾದ ಸುದ್ದಿ | ಪ್ರಾಥಮಿಕ ಶಾಲಾ ಹಂತದಿಂದಲೇ ‘ ಸ್ಪೋಕನ್ ಇಂಗ್ಲೀಷ್’ ಕಲಿಕೆ- ಸಚಿವ ಬಿ ಸಿ ನಾಗೇಶ್

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳನ್ನು ಉಳಿಸಿ, ಬೆಳೆಸಲು ಕನ್ನಡ ಮಾಧ್ಯಮದ ಜೊತೆಗೆ ಉದ್ದೇಶಿತ ‘ಸರ್ಕಾರಿ ಮಾದರಿ ಶಾಲೆ’ಗಳಲ್ಲಿ ಪ್ರಾಥಮಿಕ ಶಾಲಾ ಹಂತದಿಂದಲೇ ‘ಸ್ಪೋಕನ್ ಇಂಗ್ಲೀಷ್’ ಕಲಿಸಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವರು ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ ನಾಗೇಶ್ ತಿಳಿಸಿದರು.

 

ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ‘ಕನ್ನಡ ಶಾಲೆ ಉಳಿಸಿ: ಕನ್ನಡ ಬೆಳೆಸಿ’ ಕುರಿತು ದುಂಡು ಮೇಜಿನ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಾ ಹೇಳಿದ ಅವರು, ‘ಹೋಬಳಿ/ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಒಂದೊಂದು ಮಾದರಿ ಶಾಲೆಯನ್ನು ಅಭಿವೃದ್ಧಿಪಡಿಸುವ ಉದ್ದೇಶವಿದೆ. ಈ ಸಾಲಿನ ಬಜೆಟ್‌ನಲ್ಲಿ ಈ ಅಂಶವನ್ನು ಘೋಷಣೆ ಮಾಡಲಾಗಿದೆ. ಶಾಲೆಯ ಎಲ್ಲ ತರಗತಿಗಳಿಗೆ ಅಗತ್ಯ ಕೊಠಡಿಗಳು ಮತ್ತು ಎಲ್ಲ ಭಾಷೆ ಮತ್ತು ವಿಷಯಕ್ಕೆ ತಲಾ ಒಬ್ಬರು ಶಿಕ್ಷಕರು ಲಭ್ಯವಿರುವಂತಹ ವ್ಯವಸ್ಥೆ ಮಾಡಲಾಗುತ್ತದೆ. ಇಂತಹ ಶಾಲೆಗಳಲ್ಲಿ ಕನ್ನಡ ಕಲಿಕೆ ಜೊತೆಗೆ ಇಂಗ್ಲೀಷ್ ಕಲಿಕೆ ಹಾಗೂ ಶಿಕ್ಷಕರಿಂದ ಸ್ಪೋಕನ್ ಇಂಗ್ಲೀಷ್ ಕಲಿಸಿಕೊಡಲಾಗುತ್ತದೆ. ಇದೇ ಸಲಹೆಯನ್ನು ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ ಅವರೂ ನೀಡಿದ್ದು, ಅದನ್ನು ಸ್ವೀಕರಿಸಲಾಗುತ್ತದೆ’ ಎಂದು ಸಚಿವ ನಾಗೇಶ್ ನುಡಿದರು.

Leave A Reply

Your email address will not be published.