ಅಮೃತ್ ಮುನ್ನಡೆ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ !! | ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕೌಶಲ್ಯ ತರಬೇತಿ ಪಡೆಯಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶವೊಂದಿದೆ. ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ ಅಮೃತ್ ಮುನ್ನಡೆ ಎಂಬ ಹೊಸ ಯೋಜನೆಯ ಮುಖಾಂತರ ಉಚಿತ ವಿವಿಧ ಕೌಶಲ್ಯ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಕೊಪ್ಪಳ ಜಿಲ್ಲೆಯ ಯುವ ಜನತೆಗೆ ಕೌಶಲ್ಯ ಅಭಿವೃದ್ಧಿಪಡಿಸಿ ಅವರನ್ನು ಉದ್ಯೋಗವಂತರನ್ನಾಗಿ ಮಾಡಲು ಕೊಪ್ಪಳ ನಗರಕ್ಕೆ ಸಮೀಪವಿರುವ ತಾಲ್ಲೂಕಿನ ದದೇಗಲ್ ಗ್ರಾಮದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಅಮೃತ್ ಮುನ್ನಡೆ ಎಂಬ ಹೊಸ ಯೋಜನೆಯ ಮುಖಾಂತರ ಹಿಂದುಳಿದ ವರ್ಗಕ್ಕೆ ಸೇರಿರುವ ಅಭ್ಯರ್ಥಿಗಳಿಗೆ ಉಚಿತ ವಿವಿಧ ಕೌಶಲ್ಯ ಕೋರ್ಸ್ ಗಳಿಗೆ ತರಬೇತಿ ನೀಡಲಾಗುತ್ತಿದೆ.

ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಸಿಎನ್‌ಸಿ ಮಿಲ್ಲಿಂಗ್ ಮಷಿನ್ ಆಪರೇಟರ್, ಸಿಎನ್‌ಸಿ ಟರ್ನಿಂಗ್ ಮಷಿನ್ ಆಪರೇಟರ್ ಮತ್ತು ಮಿಲ್ಲಿಂಗ್ ಮಷಿನ್ ಆಪರೇಟರ್ ಕೋರ್ಸ್ ಗಳು ಮತ್ತು ಐಟಿಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಗೆ ಸಿಎನ್‌ಸಿ ಪ್ರೋಗ್ರಾಮಿಂಗ್ & ಅಪರೇಷನ್ ಕೋರ್ಸ್ ಹಾಗೂ ಐಟಿಐ, ಡಿಪ್ಲೋಮಾ, ಬಿಇ ವಿದ್ಯಾಭ್ಯಾಸ ಹೊಂದಿದ ಅಭ್ಯರ್ಥಿಗಳಿಗೆ ಕ್ಯಾಮ್ & ಕ್ಯಾಡ್ ಕೋರ್ಸ್ ಗಳು ಲಭ್ಯವಿದ್ದು, 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಗದಗ ರಸ್ತೆ, ದದೇಗಲ್ ಗ್ರಾಮ ಕೊಪ್ಪಳ, ಮೊ.ಸಂ. 9902556110 ಗೆ ಸಂಪರ್ಕಿಸಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave A Reply

Your email address will not be published.