ಸ್ವಾತಂತ್ರ್ಯ ದೊರಕಿ 75 ವರ್ಷದ ಬಳಿಕ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಪಡೆದ ಹಳ್ಳಿ!

ಇಲ್ಲೊಂದು ಹಳ್ಳಿಯಲ್ಲಿ ಇಲ್ಲಿಯವರೆಗೂ ವಿದ್ಯುತ್ ಸಂಪರ್ಕವಿರಲಿಲ್ಲ. ಅಂದರೆ ಭಾರತಕ್ಕೆ ಸ್ವಾತಂತ್ರ್ಯ ದೊರಕಿ 75 ವರ್ಷ ಕಳೆದರೂ ವಿದ್ಯುತ್ ಸಂಪರ್ಕವಿರಲಿಲ್ಲ.

ಭಾರತಕ್ಕೆ ಸ್ವಾತಂತ್ರ್ಯ ದೊರತು 75 ವರ್ಷದ ಕಳೆದರೂ ಜಮ್ಮು ಕಾಶ್ಮೀರದ ಹಳ್ಳಿಯೊಂದರಲ್ಲಿ ವಿದ್ಯುತ್ ಸಂಪರ್ಕವಿರಲಿಲ್ಲ. ಇದೀಗ ಈ ಹಳ್ಳಿಗೆ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ
ನೀಡಲಾಗಿದೆ.


Ad Widget

Ad Widget

Ad Widget

ಜಮ್ಮು ಕಾಶ್ಮೀರದ ಉಧಂಪುರದ ಸಡ್ಡಲ್ ಎಂಬ ಹಳ್ಳಿಗೆ ಇದೇ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.

ಕೇಂದ್ರ ಸರ್ಕಾರದ ‘ಯುನೈಟೆಡ್ ಗ್ರಾಂಟ್ಸ್ ಸ್ಕೀಮ್ ಅಡಿಯಲ್ಲಿ ಸಡ್ಡಲ್ ಹಳ್ಳಿ ಮೊದಲ ಬಾರಿಗೆ ವಿದ್ಯುತ್ ಸಂಪರ್ಕ ದೊರಕಿದೆ. ಮೇಣದ ಬತ್ತಿ ಮತ್ತು ಎಣ್ಣೆ ಬುಡ್ಡಿಗಳೇ ಇಲ್ಲಿಯವರೆಗೆ ಸಡ್ಡಲ್ ಹಳ್ಳಿಯ ಜನರ ಬೆಳಕಿನ ಮೂಲವಾಗಿತ್ತು. ವಿದ್ಯುತ್ ಸಂಪರ್ಕ ಕಲ್ಪಿಸುವ ಬಗ್ಗೆ ಇದುವರೆಗೆ ಹಲವು ಬಾರಿಗೆ ಮನವಿ ಮಾಡಲಾಗಿದ್ದರೂ ಪ್ರಯೋಜನವಾಗಿರಲಿಲ್ಲ. ಆದರೆ ಬಹುಕಾಲದ ಬೇಡಿಕೆಯೊಂದು ಈಗ ಪೂರ್ಣವಾಗುತ್ತಿರುವ ಬಗ್ಗೆ ಹಳ್ಳಿಯ ಜನರು ಸಂತಸ ವ್ಯಕ್ತಪಡಿಸಿದ್ದಾರೆ.

ಈ ಯೋಜನೆಯ ಯಶಸ್ಸಿಗಾಗಿ, ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚೆಗೆ ಜಾರಿಗೆ ಬಂದ ಪಂಚಾಯತ್ ರಾಜ್ ಕಾಯ್ದೆಯ ಮೂರು ಹಂತದ ವ್ಯವಸ್ಥೆಗೆ ಕಾರಣ ಎನ್ನುತ್ತಾರೆ ಗ್ರಾಮಸ್ಥರು.

ತಮ್ಮ ಬಹುಕಾಲದ ಬೇಡಿಕೆಯನ್ನು ಈಡೇರಿಸಿದ್ದಕ್ಕಾಗಿ ಕೇಂದ್ರ ಸರ್ಕಾರ, ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಆಡಳಿತ, ಉಧಮ್‌ಪುರ ಆಡಳಿತ ಮತ್ತು ವಿದ್ಯುತ್ ಇಲಾಖೆಗೆ ಗ್ರಾಮಸ್ಥರು ಕೃತಜ್ಞತೆ ಸಲ್ಲಿಸಿದ್ದಾರೆ.

Leave a Reply

error: Content is protected !!
Scroll to Top
%d bloggers like this: